ಬೆಂಗಳೂರು,ಡಿ.23- ಚೀನಾದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಕೊರೊನಾ ವೈರಸ್ ಆತಂಕ ಹಿನ್ನೆಲೆಯಲ್ಲಿ ವಿವಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ವಿವಿ ಆವರಣ ಪ್ರವೇಶಿಸುವಂತೆ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ಮಾಸ್ಕ್ ಧರಿಸುವುದರ ಜತೆಗೆ ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಪಡೆದುಕೊಳ್ಳುವಂತೆಯೂ ಸೂಚಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಬಂಧನ
ಒಂದು ವೇಳೆ ಕೊರೊನಾ ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ. ಕೊರೊನಾ ಆರಂಭವಾದ ನಂತರ ನಾವು ಹಲವಾರು ಅವಘಡಗಳನ್ನು ಎದುರಿಸಿದ್ದೇವೆ. ಮತ್ತೆ ಅಂತಹ ಪರಿಸ್ಥಿತಿ ಬರಬಾರದು ಹೀಗಾಗಿ ಎಲ್ಲರೂ ನಿಯಮ ಪಾಲನೆ ಮಾಡುವ ಮೂಲಕ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
#BangaloreUniversity, #MaskMandatory, #CoronaOutbreak,