ಬೆಂಗಳೂರನ್ನು ವಿಶ್ವದರ್ಜೆ ನಗರವನ್ನಾಗಿಸಲು ಸಿದ್ದು ಸಂಕಲ್ಪ

ಬೆಂಗಳೂರು, ಫೆ.9- ವಿಶ್ವದರ್ಜೆಯ ನಗರವನ್ನಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು, ಬೆಂಗಳೂರು ಬ್ಯುಜಿನೆಸ್ ಕಾರಿಡಾರ್ ಸ್ಥಾಪಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ. ನಗರದ ಜನರ ಜೀವನ ಗುಣಮಟ್ಟ ಸುಧಾರಣೆ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ದಿಟ್ಟ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಸಂಪನ್ಮೂಲ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, … Continue reading ಬೆಂಗಳೂರನ್ನು ವಿಶ್ವದರ್ಜೆ ನಗರವನ್ನಾಗಿಸಲು ಸಿದ್ದು ಸಂಕಲ್ಪ