40 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ಜಪ್ತಿ

Social Share

ಬೆಂಗಳೂರು, ನ.30- ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಗರದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ- ಸಿಗರೇಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ ಆರೋಪಿಗಳು ವಿದೇಶದಿಂದ ಇ-ಸಿಗರೇಟ್ ಉತ್ಪನ್ನಗಳನ್ನು ಆಮದು ಮಾಡಿಕೊಂಡು ಕೋರಮಂಗಲ, ಬಾಣಸವಾಡಿ, ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದರು.

ಪ್ರೇಯಸಿಯ ಕೊಲೆಯಲ್ಲಿ ಕೊನೆಯಾಯ್ತು ಲಿವಿಂಗ್ ಟುಗೆದರ್ ಲವ್

ಈ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಅಂಗಡಿಗಳ ಮೇಲೆ ದಾಳಿ ಮಾಡಿ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ-ಸಿಗರೇಟ್‍ಗಳನ್ನು ವಶಪಡಿಸಿಕೊಂಡು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.
ಇ-ಸಿಗರೇಟ್ ಸೇವನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರ 2019ರಲ್ಲಿ ಈ ಉತ್ಪನ್ನಗಳನ್ನು ನಿಷೇಧಿಸಿದೆ.

ಕೊಲಿಜಿಯಂನ 19 ಹೆಸರುಗಳು ತಿರಸ್ಕಾರ : ಕೇಂದ್ರ – ನ್ಯಾಯಾಂಗ ಸಂಘರ್ಷ..?

ನಿಷೇಧದ ನಡುವೆಯೂ ನಗರದಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರು ಗಂಭೀರವಾಗಿ ಪರಿಗಣಿಸಿ ಈ ಕಾರ್ಯಾಚರಣೆ ನಡೆಸಿದೆ. ಈ ಬಗ್ಗೆ ಪುಲಿಕೇಶಿ ನಗರ, ಕೋರಮಂಗಲ, ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

bangaluru, ccb, raids, banned, ecigarettes, selling, shop,

Articles You Might Like

Share This Article