Sunday, September 8, 2024
Homeರಾಷ್ಟ್ರೀಯ | Nationalಚಿಕಿತ್ಸೆಗಾಗಿ ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾ ಸಂಸದ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆ

ಚಿಕಿತ್ಸೆಗಾಗಿ ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾ ಸಂಸದ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆ

ಢಾಕಾ, ಮೇ 22 – ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್‌ ಅಜೀಮ್‌ ಅನಾರ್‌ ಅವರು ಕೊಲ್ಕತ್ತಾದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅಸಾದುಝಮಾನ್‌ ಖಾನ್‌ ತಿಳಿಸಿದ್ದಾರೆ.

ಭಾರತದಲ್ಲಿ ನಾಪತ್ತೆಯಾಗಿದ್ದ ಅವಾಮಿ ಲೀಗ್‌ ಸಂಸದ ಅನ್ವರುಲ್‌ ಅಜೀಮ್‌ ಅನಾರ್‌ ಅವರನ್ನು ಕೋಲ್ಕತ್ತಾದ ಫ್ಲಾಟ್‌ನಲ್ಲಿ ಕೊಲೆ ಮಾಡಲಾಗಿದೆ ಎಂದು ಖಾನ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ ಇಲ್ಲಿಯವರೆಗೆ ತಿಳಿದುರುವಂತೆ ಎಲ್ಲಾ ಹಂತಕರು ಬಾಂಗ್ಲಾದೇಶೀಯರು ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಇದೊಂದು ಯೋಜಿತ ಕೊಲೆಯಾಗಿದೆ, 56 ವರ್ಷದ ಸಂಸದನ ಹತ್ಯೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ ಎಂದು ದಿ ಡೈಲಿ ಸ್ಟಾರ್‌ ವರದಿ ಮಾಡಿದೆ.

ಮೃತದೇಹ ಎಲ್ಲಿದೆ ಎಂದು ವಿಚಾರಿಸಿದಾಗ ಅದರ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದರು. ಉದ್ದೇಶದ ಬಗ್ಗೆ ನಾವು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ಸಚಿವರು ಹೇಳಿದರು, ಭಾರತೀಯ ಪೊಲೀಸರು ಪ್ರಕರಣಕ್ಕೆ ಸಹಕರಿಸುತ್ತಿದ್ದಾರೆ ಎಂದು ಹೇಳಿದರು.

ಮೂರನೇ ಬಾರಿ ಸಂಸದರಾಗಿದ್ದ ಅಜೀಮ್‌ ಅನಾರ್‌ ಅವರು ಕಲಿಗಂಜ್‌ ಉಪಜಿಲಾ ಘಟಕದ ಅಧ್ಯಕ್ಷರಾಗಿದ್ದರು ಆರೋಗ್ಯ ಚಿಕಿತ್ಸೆಗಾಗಿ ವೈಯಕ್ತಿಕ ಕಳೆದ ಮೇ 12 ರಂದು ಭಾರತಕ್ಕೆ ತೆರಳಿದ್ದರು. ಮೇ 18 ರಂದು ಉತ್ತರ ಕೋಲ್ಕತ್ತಾದ ಬಾರಾನಗರ ಪೊಲೀಸ್‌‍ ಠಾಣೆಯಲ್ಲಿ ಅವರ ನಾಪತ್ತೆ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಧಾನ ಮಂತ್ರಿ ಶೇಖ್‌ ಹಸೀನಾ ಅವರು ಅಜೀಂ ಅವರ ನಿಧನಕ್ಕೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ ಅವರು ಪ್ರತಿನಿಧಿಸುವ ಜೆನೈದಾ ಗಡಿ ಪ್ರದೇಶವಾಗಿದ್ದು, ಹೆಚ್ಚಿನ ಅಪರಾಧ ಪ್ರಮಾಣಕ್ಕೆ ಹೆಸರುವಾಸಿಯಾಗಿದೆ.

RELATED ARTICLES

Latest News