ಬೆಂಗಳೂರು,ಜ.24- ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಾಂಗ್ಲಾ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಂಗ್ಲಾ ಮೂಲದ ಮಹಿಳೆ ನಜಾ ಅವರು ಮೂರು ಮಕ್ಕಳ ತಾಯಿ. ನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದುಕೊಂಡು ಡಿ.ಎಸ್.ಆರ್ ಅಪಾರ್ಟ್ಮೆಂಟ್ನಲ್ಲಿ ಮನೆಗೆಲಸ ಮಾಡುತ್ತಿದ್ದರು. ಇಂದು ಬೆಳಗಾಗುವಷ್ಟರಲ್ಲಿ ಈ ಮಹಿಳೆ ಶವ ಕಲ್ಕೆರೆ ಕೆರೆ ಬಳಿ ಪತ್ತೆಯಾಗಿದೆ. ಈ ಮಾರ್ಗದಲ್ಲಿ ಹೋಗುತ್ತಿದ್ದವರು ಮೃತದೇಹ ಗಮನಿಸಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ, ಶ್ವಾನದಳ ಹಾಗೂ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದೆ. ನಿನ್ನೆ ಸಂಜೆ ಅಥವಾ ರಾತ್ರಿ ವೇಳೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಈ ಘಟನಾ ಸ್ಥಳದ 1 ಕಿಲೋ ಮೀಟರ್ ದೂರದಲ್ಲಿ ಈ ಮಹಿಳೆ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿರಹುದೆಂದು ಹೇಳಲಾಗುತ್ತಿದೆ.
ನಾಜಾ ಅವರ ಪತಿ ಸುಮನ್ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಜೆ ಪತ್ನಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಪತಿ ಹಾಗೂ ಮಕ್ಕಳು ಆತಂಕಕ್ಕೀಡಾಗಿದ್ದರು. ಬೆಳಗ್ಗೆ ಮನೆಗೆ ಬರಬಹುದು ಎಂದು ನಿರೀಕ್ಷೆಯಲ್ಲಿದ್ದ ಮನೆಯವರಿಗೆ ಈ ಘಟನೆಯಿಂದ ಆಘಾತ ಉಂಟಾಗಿದೆ. ಇದೀಗ ಮಹಿಳೆ ಮೃತ ದೇಹವನ್ನು ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಸ್ಥಳ ಪರಿಶೀಲನೆ ಮಾಡಿ ಮಾತನಾಡಿದ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು, ಇಂದು ಬೆಳಗ್ಗೆ 112ಗೆ ಕರೆ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮಧ್ಯವಯಸ್ಕ ಮಹಿಳೆ ಕೊಲೆಯಾಗಿರುವುದು ಕಂಡುಬಂದಿದೆ.
ಈ ಮಹಿಳೆಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರುವುದು ಗೊತ್ತಾಗಿದೆ. ಈಕೆ ಡಿಎಸ್ ಅರ್ ಅಪಾರ್ಟೆಂಟ್ ನಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಈ ಮಹಿಳೆಯು ಇನ್ನು ಅರ್ಧ ಗಂಟೆಯಲ್ಲಿ ಮನೆಗೆ ಬರುವುದಾಗಿ ಹೇಳಿ ಈ ರಸ್ತೆಯಲ್ಲಿ ಬಂದಿದ್ದಾರೆ. ಆದರೆ ಸಂಜೆಯಾದರೂ ಮನೆಗೆ ಹೋಗಿಲ್ಲ.
ಆಗ ಮನೆಯವರಯ ಅನುಮಾನಗೊಂದು ಹುಡುಕಾಟ ನಡೆಸಿದರೂ, ಈಕೆಯ ಸುಳಿವು ಸಿಕ್ಕಿಲ್ಲ. ಹಾಗಾಗಿ ರಾತ್ರಿ ಆಗುತ್ತಿದ್ದಂತೆ ರಾಮಮೂರ್ತಿ ನಗರ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಸದ್ಯ ರೇಪ್ ಅಂಡ್ ಮರ್ಡರ್ ಆಗಿರುವುದು ಗೊತ್ತಾಗಿದೆ. ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹ ಪತ್ತೆಯಾದ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.