ನವದೆಹಲಿ,ಜು.:- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿವೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಯುತ್ತಿದೆ. ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ಬ್ಯಾಂಕ್ ಸೇವೆಗಳನ್ನು ಪಡೆಯಲು ಕಷ್ಟಪಡಬೇಕಾಗಬಹುದು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ.
ಈ ಬಾರಿಯ ಮುಷ್ಕರ ತನ್ನ ವ್ಯಾಪಕ ಭಾಗವಹಿಸುವಿಕೆಯಿಂದ ದೇಶದ ದೈನಂದಿನ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಈ ಮುಷ್ಕರದಿಂದಾಗಿ ಸಾರ್ವಜನಿಕ ಸೇವೆಗಳಾದ ಬ್ಯಾಂಕಿಂಗ್, ಸಾರಿಗೆ ಮತ್ತು ಅಂಚೆ ಸೇವೆಗಳಲ್ಲಿ ಅಡಚಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ, ಜನರು ತಮ್ಮ ತುರ್ತು ಕೆಲಸಗಳಾದ ನಗದು ಹಿಂಪಡೆಯುವಿಕೆ, ಚೆಕ್ ಠೇವಣಿ ಅಥವಾ ಇತರ ಹಣಕಾಸು ವ್ಯವಹಾರಗಳನ್ನು ಜುಲೈ ಕರೆ ಒಳಗೆ ಪೂರ್ಣಗೊಳಿಸಿಕೊಳ್ಳುವುದು ಒಳಿತು. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಲಭ್ಯವಿರಬಹುದಾದರೂ, ತಾಂತ್ರಿಕ ತೊಂದರೆಗಳಿಗೆ ಸಿದ್ಧರಾಗಿರುವುದು ಉತ್ತಮ. ಆರೋಗ್ಯ ಮತ್ತು ತುರ್ತು ಸೇವೆಗಳಿಗೆ ಯಾವುದೇ ಅಡಚಣೆಯಿಲ್ಲ ಎಂದು ಒಕ್ಕೂಟಗಳು ಭರವಸೆ ನೀಡಿವೆ.
ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ಭಾರತ್ ಬಂದ್‌ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ವರ ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.
ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ. ಈ ಮುಷ್ಕರವು ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಹಿಂದ್ ಮನ್ಸೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಅವರ ಪ್ರಕಾರ, ಬ್ಯಾಂಕಿಂಗ್, ಆಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ಮತ್ತು ರಾಜ್ಯ ಸಾರಿಗೆ ಸೇವೆಗಳ ಮೇಲೆ ಈ ಮುಷ್ಕರ ತೀವ್ರವಾಗಿ ಪರಿಣಾಮ ಬೀರಲಿದೆ.
ನಾಳೆ ಯಾವೆಲ್ಲಾ ಸೇವೆಗೆ ಅಡಚಣೆ?
ರಾಷ್ಟ್ರವ್ಯಾಪಿ ಬ್ಯಾಂಕ್ ಶಾಖೆಗಳು ಮುಚ್ಚಲ್ಪಡಬಹುದು, ಚೆಕ್ ಕ್ಲಿಯರೆನ್ಸ್, ಗ್ರಾಹಕ ಸೇವೆಗಳು, ಮತ್ತು ಇತರ ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಇದರ ಜೊತೆಗೆ, ಅಂಚೆ ಕಚೇರಿಗಳು ಕಲ್ಲಿದ್ದಲು ಗಣಿಗಾರಿಕೆ ಘಟಕಗಳು, ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಾದ ಶಾಲೆಗಳು ಮತ್ತು ಕಾಲೇಜುಗಳು ಸಹ ಮುಚ್ಚಲ್ಪಡಬಹುದು. ಸಾರಿಗೆ ವಲಯದಲ್ಲಿ, ರಾಜ್ಯ ಸಾರಿಗೆ ಬಸ್ ಗಳ ಕಾರ್ಯಾಚರಣೆಯೂ ಅಡಚಣೆಗೊಳಗಾಗಬಹುದು.
ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಸೇವೆಗಳು ಕಲ್ಲಿದ್ದಲು ಗಣಿಗಾರಿಕೆ ಮತ್ತು ಕಾರ್ಖಾನೆಗಳು, ಸಾರಿಗೆ ವ್ಯವಸ್ಥೆ,ಶಿಕ್ಷಣ ಸಂಸ್ಥೆಗಳು ಹಲವು ಶಾಲೆಗಳು ಮತ್ತು ಕಾಲೇಜುಗಳು), ಸಾರ್ವಜನಿಕ ವಲಯದ ಉದ್ಯಮಗಳ ಮೇಲೆ ಪರಿಣಾಮ ಭೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ,
ಯಾವೆಲ್ಲಾ ಸೇವೆ ಇರುತ್ತೆ!
ಆದಾಗ್ಯೂ, ರೈಲ್ವೆ, ಆರೋಗ್ಯ, ಮತ್ತು ತುರ್ತು ಸೇವೆಗಳಂತಹ ಅಗತ್ಯ ಸೇವೆಗಳಿಗೆ ಈ ಮುಷ್ಕರದಿಂದ ವಿನಾಯಿತಿ ನೀಡಲಾಗಿದೆ. ಮಾರುಕಟ್ಟೆಗಳು ಮತ್ತು ಅಂಗಡಿಗಳು ಭಾಗಶಃ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ನೆಟ್ ಬ್ಯಾಂಕಿಂಗ್, ಯುಪಿಐ ಎಂದಿನಂತೆ ಕಾರ್ಯ ನಿರ್ವಹಿಸಬಹುದಾದರೂ. ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಬಹುದು.
ಕಾರ್ಮಿಕರ ಬೇಡಿಕೆಗಳು ಏನು?
ಕಾರ್ಮಿಕ ಸಂಘಗಳು ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಲ್ ಮಾಂಡವಿಯಾ ಅವರಿಗೆ ಸಲ್ಲಿಸಿದ 17 ಅಂಶಗಳ ಬೇಡಿಕೆಗಳ ಸನ್ನದಿನ ಮೇಲೆ ಈ ಮುಷ್ಕರ ಆಧರಿಸಿದೆ. ಸರ್ಕಾರವು ಕಾರ್ಮಿಕರ ಕಳವಳಗಳನ್ನು ನಿರ್ಲಕ್ಷಿಸಿದೆ ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ನಡೆಸಲು ವಿಫಲವಾಗಿದೆ ಎಂದು ಒಕ್ಕೂಟಗಳು ಆರೋಪಿಸಿವೆ. ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ: ಈ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಒಕ್ಕೂಟಗಳು ಆರೋಪಿಸಿವೆ.
ಕೆಲಸದ ಸಮಯ ಹೆಚ್ಚಳ: ಕಾರ್ಮಿಕರ ಕೆಲಸದ ಸಮಯವನ್ನು ಹೆಚ್ಚಿಸುವ ನೀತಿಗಳನ್ನು ವಿರೋಧಿಸಲಾಗುತ್ತಿದೆ. ಗುತ್ತಿಗೆ ಮತ್ತು ಹೊರಗುತ್ತಿಗೆ: ಸಾರ್ವಜನಿಕ ವಲಯದಲ್ಲಿ ಗುತ್ತಿಗೆ ಆಧಾರಿತ ನೇಮಕಾತಿಗಳು ಕಾರ್ಮಿಕರ ಭದ್ರತೆಗೆ ಧಕ್ಕೆ ತರುತ್ತಿವೆ. ಹೊಸ ನೇಮಕಾತಿಗಳ ಕೊರತೆ: ಸರ್ಕಾರಿ ಮತ್ತು ಸಾರ್ವಜನಿಕ ವಲಯದಲ್ಲಿ ಶಾಶ್ವತ ಉದ್ಯೋಗ ಸೃಷ್ಟಿಯ ಕೊರತೆ, ಕಾರ್ಪೊರೇಟ್ ಪರ ನೀತಿಗಳು: ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದೆ ಎಂಬ ಆರೋಪ ಇದೆ.
ಮುಷ್ಕರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ವಿವಿಧ ಕೃಷಿ ಕಾರ್ಮಿಕ ಸಂಘಗಳು ಬೆಂಬಲ ಘೋಷಿಸಿವೆ. ರೈತರು ಮತ್ತು ಗ್ರಾಮೀಣ ಕಾರ್ಮಿಕರು ಗ್ರಾಮೀಣ ಪ್ರದೇಶಗಳಲ್ಲಿ ರ್ಯಾಲಿಗಳು ಮತ್ತು ಪ್ರತಿಭಟನೆಗಳನ್ನು ಆಯೋಜಿಸಲು ಯೋಚಿಸಿದ್ದಾರೆ. ಆರ್ಥಿಕ ಸಂಕಷ್ಟ, ನಿರುದ್ಯೋಗ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಗಳನ್ನು ಎತ್ತಿ ತೋರಿಸುವ ಗುರಿಯನ್ನು ಈ ಪ್ರತಿಭಟನೆಗಳು ಹೊಂದಿವೆ. ಜುಲೈ 9, 2025ರ ಭಾರತ್ ಬಂದ್ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಗಳು, ರೈತ ಸಂಘಟನೆಗಳು ಮತ್ತು ಗ್ರಾಮೀಣ ಕಾರ್ಮಿಕರ ಒಗ್ಗಟ್ಟಿನ ಪ್ರದರ್ಶನವಾಗಿದೆ.
ಎಐಟಿಸಿಯು, ಸಿಐಟಿಯು, ಹೆಚ್.ಎಂ.ಎಸ್, ಐಎನ್‌ಟಿಯುಸಿ, ಎಸ್ ಡಬ್ಲ್ಯು ಸೇರಿದಂತೆ ಮುಂತಾದ ಸಂಘಗಳ ನೇತೃತ್ವದಲ್ಲಿ 25 ಕೋಟಿಗೂ ಹೆಚ್ಚು ಜನರ ಭಾಗವಹಿಸುವಿಕೆಯಿಂದ ಈ ಮುಷ್ಕರವು ದೇಶದ ಆರ್ಥಿಕ ಚಟುವಟಿಕೆಗಳನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸಲಿದೆ. ಈ ಪ್ರತಿಭಟನೆಯು ಸರ್ಕಾರಕ್ಕೆ ಕಾರ್ಮಿಕರ ಮತ್ತು ರೈತರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-11-2025)
- Elevate Your Gameplay Experience the Thrill of the aviator game with Real-Time Action, Verifiable Fa
- лучшие казино онлайн 2025 обзор проверенных сайтов.571
- Fortune Favors the Bold Master the Plinko app with High RTP & Adjustable Risk for Massive Wins.
- Verhoog je winkansen exclusieve billionaire spin promo code, stortingen in crypto & directe uitbetal
