Saturday, July 27, 2024
Homeರಾಜ್ಯಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : HDK ಆಕ್ರೋಶ

ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : HDK ಆಕ್ರೋಶ

ಬೆಂಗಳೂರು,ಮೇ 16- ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯಸರ್ಕಾರ ತಾಕೀತು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಹಾಗೂ ಬರಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದ್ದ ಬರಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳ ವರ್ತನೆ ನಿಜಕ್ಕೂ ಕ್ರೂರಾತಿಕೂರವಾಗಿದ್ದು, ಖಂಡನೀಯವಾಗಿದೆ ಎಂದಿದ್ದಾರೆ.

ಈಗಾಗಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದರೆ ತಪ್ಪಲ್ಲ ಎಂದು ಹೇಳಿದ್ದಾರೆ.ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆ ಎಂಬುದೇ ಇಲ್ಲದಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ದಾತನಾಗಿ ನಿಲ್ಲಬೇಕಾಗಿದ್ದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಟೀಕಿಸಿದ್ದಾರೆ.

RELATED ARTICLES

Latest News