Friday, November 22, 2024
Homeರಾಜ್ಯಬರ ಪರಿಹಾರ ಹಣವನ್ನು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸೂಚನೆ

ಬರ ಪರಿಹಾರ ಹಣವನ್ನು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸೂಚನೆ

ಬೆಂಗಳೂರು,ಮೇ 18- ಕಳೆದ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಪರಿಹಾರ ಧನವನ್ನು ಬ್ಯಾಂಕುಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚಿಸಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲೆಯ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಎರಡನೇ ಹಂತದ ಬರಪರಿಹಾರವನ್ನು ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಒಟ್ಟು 40,469 ಫಲಾನುಭವಿಗಳಿಗೆ ಒಟ್ಟು 18,85,68,305 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರಿಹಾರವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರೈತರಿಗೆ ಬಿಡುಗಡೆಯಾದ ಬರಪರಿಹಾರದ ಮೊತ್ತವನ್ನು ಬೆಳೆಸಾಲ ಅಥವಾ ಇತರ ಯಾವುದೇ ವಿಷಯಗಳಿಗೆ ಬ್ಯಾಂಕುಗಳಲ್ಲಿ ಕಡಿತಗೊಳಿಸುತ್ತಿರುವ ವಿಷಯವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರವನ್ನು ಬೆಳೆ ಸಾಲ ಅಥವಾ ಯಾವುದೇ ವಿಷಯಗಳಿಗೆ ಕಡಿತಗೊಳಿಸದಂತೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದ್ದು, ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡಿರುವ ನಿರ್ದೇಶನಗಳನ್ನ ಪಾಲಿಸಲು ಸೂಚಿಸಿದ್ದಾರೆ.

RELATED ARTICLES

Latest News