Tuesday, July 16, 2024
Homeರಾಜ್ಯಪರಿಷತ್‌ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ

ಪರಿಷತ್‌ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂ.11– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಸನಗೌಡ ಬಾದರ್ಲಿ ಇಂದು ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮುಖದಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿ ಬಾದರ್ಲಿ ಅವರು, ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಸ್ವೀಕರಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಬಸನಗೌಡ ಬಾದರ್ಲಿ ಹೊರತುಪಡಿಸಿ ಬೇರೆ ಅಭ್ಯರ್ಥಿಗಳು ಸ್ಪರ್ಧಿಸಿರಲಿಲ್ಲ. ಪ್ರತಿಪಕ್ಷಗಳಾದ ಜೆಡಿಎಸ್‌‍ ಮತ್ತು ಬಿಜೆಪಿ ಚುನಾವಣೆಯಿಂದ ದೂರ ಉಳಿದಿದ್ದವು. ಹೀಗಾಗಿ ಬಾದರ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಾದರ್ಲಿ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದರು.

RELATED ARTICLES

Latest News