ಬೆಂಗಳೂರು, ಜು.5– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಚುನಾವಣೆಯಲ್ಲಿ ಸ್ಪರ್ಧಿಸದೇ ದೂರ ಉಳಿದಿದ್ದವು.
ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಮಾತ್ರ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಲಿದ್ದಾರೆ. ಇವರ ಮೇಲನೆ ಸದಸ್ಯತ್ವದ ಅವಧಿ 2028ರ ಜೂನ್ 14ರವರೆಗೆ ಇರಲಿದೆ. ಈ ಚುನಾವಣಾ ಫಲಿತಾಂಶದ ನಂತರ ಮೇಲನೆಯಲ್ಲಿ ಕಾಂಗ್ರೆಸ್ ಸದಸ್ಯರ ಬಲ 33ಕ್ಕೆ ಹೆಚ್ಚಾಗಲಿದೆ.