ವಿಧಾನಸೌಧದೆದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜ.13 ರಂದು ಶಂಕುಸ್ಥಾಪನೆ

Social Share


ಬೆಂಗಳೂರು,ಜ.10- ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಇದೇ 13ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಈ ಎರಡೂ ಪ್ರತಿಮೆಗಳನ್ನು ನಿರ್ಮಿಸಲಾಗುತ್ತಿದ್ದು, 13ರಂದು ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿ ಆದಷ್ಟು ಶೀಘ್ರ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ.

ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಗಳನ್ನು ಅಶ್ವಾರೂಢ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದ್ದು, ಸಚಿವರಾದ ಆರ್.ಅಶೋಕ್ ಮತ್ತು ಸಿ.ಸಿ.ಪಾಟೀಲ್‍ಗೆ ಇದರ ನಿರ್ವಹಣೆಯ ಉಸ್ತುವಾರಿಯನ್ನು ನೀಡಲಾಗಿದೆ.

ಮೊದಲ ಪತ್ನಿ ಕೊಂದು ನಾಟಕವಾಡಿದ್ದನಾ ಸ್ಯಾಂಟ್ರೋ ರವಿ..?

ಈಗಾಗಲೇ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿದರು.

ಇದೀಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯದ ಮತಗಳನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ಆ ಸಮುದಾಯದ ಆಸ್ಮಿತೆಯಂತಿರುವ ಪ್ರತಿಮೆಗಳನ್ನು ನಿರ್ಮಿಸುವ ಮೂಲಕ ಮತ ಬುಟ್ಟಿಗೆ ಕೈ ಹಾಕಿದೆ.

ಅನಾಮಧೇಯ ವ್ಯಕ್ತಿಗಳಿಗೆ ಕುಮಾರ ಕೃಪಾ ಪ್ರವೇಶ ನಿರ್ಬಂಧ

ಕೆಲ ದಿನಗಳ ಹಿಂದೆ ಬೆಳಗಾವಿಯ ಸುವರ್ಣಸೌಧದ ಮುಂಭಾಗ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೂ ಬೊಮ್ಮಾಯಿ ಶಂಕುಸ್ಥಾಪನೆ ಮಾಡಿದ್ದರು.

Basavanna, Kempegowda, statues, Vidhana Soudha,

Articles You Might Like

Share This Article