Saturday, May 4, 2024
Homeರಾಜಕೀಯಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ

ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ

ಬೆಂಗಳೂರು,ಫೆ.7- ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ ಒರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಾಚಿಕೆಯಾಗಬೇಕು ಇವರಿಗೆ ಎಂದರು.

ಸಿದ್ದರಾಮಯ್ಯ ಅವರು ಯುಪಿಎ ಸರ್ಕಾರದಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಹೇಳಿ ಯುಪಿಎ ಅಧಿವಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ ಕಲಾದಲ್ಲಿ 2.82 ಲಕ್ಷ ಕೋಟಿ ಬಂದಿದೆ. ಎರಡು ಲಕ್ಷ ಕೋಟಿ ರೂ ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ. ಮೊದಲು ರಾಜ್ಯಗಳಿಗೆ ಅನುದಾನ 32% ಬರುತ್ತಿತ್ತು. ಮೋದಿಯವರು ಅದನ್ನು ಶೇ.42 ಹೆಚ್ಚಳ ಮಾಡಿದ್ದಾರೆ.

ಹಣಕಾಸು ಆಯೋಗ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಅದು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಬಡತನ, ಜಸಂಖ್ಯೆ ತಲಾ ಆದಾಯ ಎಲ್ಲವನ್ನು ಪರಿಗಣನೆ ಮಾಡುತ್ತದೆ. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಭೇಟಿ ನೀಡಿದಾಗ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಆಗ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ತಿಳಿಸಲು ವಿಫಲವಾಗಿದೆ. ರಾಜ್ಯದ ಪಾಲು ಶೇ.4.7ರಿಂದ 3.6ಗೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೆ ಕಾರಣ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೃಷ್ಣಾ 3ನೇ ಹಂತದ ಯೊಜನೆಗೆ ನಾವು ಚಾಲನೆ ಕೊಟ್ಡಿದ್ದೇವೆ. ಅದನ್ನು ಸಿದ್ದರಾಮಯ್ಯ ಮುಂದುವರೆಸಿಲ್ಲ. ಭದ್ರ ಯೋಜನೆ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಕಾವೇರಿ ಕೊಳ್ಳದ ಯೋಜನೆಗಳು ಸ್ಥಗಿತವಾಗಿವೆ. ನಾವು ಪ್ರವಾಹ ಬಂದಾಗ ನೇರವಾಗಿ ರೈತರ ಅಕೌಂಟ್‍ಗೆ ಹಣ ವರ್ಗಾವಣೆ ಮಾಡಿದ್ದೇವೆ.

ಯಾವ ಸರ್ಕಾರ ರೈತರು, ಮಹಿಳೆಯರು, ಬಡವರ ಕಷ್ಟಕ್ಕೆ ಸ್ಪಂದಿಸುವುದಿಲ್ಲವೋ ಅದು ಇದ್ದೂ ಸತ್ತಂತೆ. ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರಕ್ಕೆ ಸರಿಯಾದ ಪ್ರಸ್ತಾವನೆಯನ್ನೇ ಕೊಟ್ಟಿಲ್ಲ. ಸಿದ್ದರಾಮಯ್ಯ ನಿಮ್ಮ ಸರ್ಕಾರದ ಇತರ ಇಲಾಖೆಗಳಲ್ಲಿ ಏನು ನಡೆಯುತ್ತಿದೆ ಎಂದು ನೋಡಿ, ಬರೆ ವರ್ಗಾವಣೆ ದಂಧೆ ಮಾಡಿಕೊಂಡು ತಿರುಗಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ಅನುದಾನ ಕೂಡ ಬಿಡಿಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿಗೂ ಅನ್ಯಾಯ ಮಾಡುತ್ತಿದ್ದಾರೆ. ಖಜಾನೆ ತುಂಬಿದ್ದರೆ ರೈತರಿಗೆ ಬರ ಪರಿಹಾರ ಕೊಡಿ, ಕಲ್ಯಾಣ ಕರ್ನಾಟಕಕ್ಕೆ 3000 ಕೋಟಿ ಬಿಡುಗಡೆ ಮಾಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆದರೆ ಅದನ್ನು ಬಿಡಿಗಡೆ ಮಾಡಿಲ್ಲ. ಮೋದಿಯವರು ರಾಜ್ಯಕ್ಕೆ ಸ್ಮಾರ್ಟ್ ಸಿಟಿ, ಹೈವೆ, ರೈಲ್ವೆ, ಕೈಗಾರಿಕೆಗಳನ್ನು ನೀಡಿದ್ದಾರೆ.

ನರಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾಗಿ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ. ಗಾಂಧಿ ಫೋಟೊ ಹಾಕಿಕೊಂಡ ಜಾಹಿರಾತು ನೀಡಿ ಗಾಂಗೂ ಅವಮಾನ ಮಾಡಿದ್ದಾರೆ. ವಿಧಾನಸೌಧ ಸಂಪೂರ್ಣ ಖಾಲಿಯಾಗಿದ್ದು, ಸರ್ಕಾರ ಕಾಣೆಯಾಗಿದೆ. ಸಿಎಂ, ಮಂತ್ರಿಗಳನ್ನು ಹುಡುಕಿಕೊಡಿ ಎಂದು ವಾರೆಂಟ್ ಹೊರಡಿಸಬೇಕು ಎಂದು ಹೇಳಿದರು.

RELATED ARTICLES

Latest News