Thursday, January 9, 2025
Homeರಾಜಕೀಯ | Politicsಕಾಂಗ್ರೆಸ್‌ನಲ್ಲಿ ಅಭದ್ರತೆ-ಒಳ ಬೇಗುದಿ ಇದೆ, ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ : ಬೊಮ್ಮಾಯಿ

ಕಾಂಗ್ರೆಸ್‌ನಲ್ಲಿ ಅಭದ್ರತೆ-ಒಳ ಬೇಗುದಿ ಇದೆ, ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ : ಬೊಮ್ಮಾಯಿ

Basavaraj Bommai on Congress internal Conflict

ಬೆಂಗಳೂರು,ಜ.8- ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭ ದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ.

ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆ ದಾರರು ಅನುಭವಿಸುತ್ತಿ ದ್ದಾರೆ. ಜನಸಾಮಾನ್ಯರು ರೋಸಿ ಹೋಗಿ ದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ ಎಂದರು.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣ ವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್ಸಿ, ಎಸ್ಟಿ ಬೋರ್ ವೆಲ್ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎಂಬ ಭಾವನೆ ಮೂಡಿರಬಹುದು ಎಂದು ಹೇಳಿದರು.

ಸರ್ಕಾರದಲ್ಲಿ ಒಂದೊಂದು ಇಲಾಖೆ ಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಎಂದು ಹೇಳಲು ಆಗುವುದಿಲ್ಲ. ಇದಕ್ಕೇ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕುಮಾರಸ್ವಾಮಿ ಹೇಳಿದ್ದು ಎಂದರು.

ಕಾಂಗ್ರೆಸ್ನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆ ಯುತ್ತಿಲ್ಲ. ಅಂಗನಾವಡಿ ಕಾರ್ಯ ಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆ ಯರಿಗೆ ಪ್ಯಾರಿ ದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರೆಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿ ದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡು ತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.

ಗೊಂದಲಕ್ಕೆ ತೆರೆ: ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ ಎಂದರು.

ರಾಜ್ಯ ಬಿಜೆಪಿಯಲ್ಲಿನ ಗೊಂದಲ ಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಅವರು ಹೇಳಿದರು.

RELATED ARTICLES

Latest News