ಬೆಳಗಾವಿ,ಡಿ.18- ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಜೆಡಿಎಸ್ನಿಂದ ಪರಿಷತ್ ಸದಸ್ಯರಾಗಿದ್ದ ವೇಳೆ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಿದ್ದರು. ನಂತರ ಬಿಜೆಪಿ ಸೇರಿದ ಅವರು ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಸಭಾಪತಿ ಸ್ಥಾನ ಸಿಗುವ ಸಾಧ್ಯತೆ ಇದೆ.
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-12-2022)
ಈ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ದೂರವಾಣಿ ಮೂಲಕ ತಮ್ಮೊಂದಿಗೆ ಮಾತನಾಡಿ, ನೀವು ಸಭಾಪತಿ ಸ್ಥಾನದ ಅಭ್ಯರ್ಥಿಗಳಾಗಿದ್ದೀರಿ ಎಂದು ಮಾಹಿತಿ ನೀಡಿದ್ದಾರೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
#BasavarajHoratti, #WinterSession, #SuvarnaSoudha, #KarnatakaAssemblySession, #ಅಧಿವೇಶನ, #BelagaviSession, #ಸುವರ್ಣಸೌಧ, #ಚಳಿಗಾಲದಅಧಿವೇಶನ,