ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರಿಡಲು ಪ್ರಸ್ತಾವನೆ

Social Share

ಬೆಂಗಳೂರು,ಅ.21- ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂಪುಟದ ಸಹೋದ್ಯೋಗಿಗಳನ್ನು ಅಭಿನಂದಿಸಿದ್ದಾರೆ.

ಗಾಂಧಿ ಕುಟುಂಬ ಪ್ರಭಾವದೆದುರು ಈಜುವುದೇ ಖರ್ಗೆ ಮುಂದಿರುವ ಬೃಹತ್ ಸವಾಲು

ವಿಜಯಪುರ ನಗರದಲ್ಲಿ ಎ.ಟಿ.ಆರ್.72 ಮಾದರಿ ವಿಮಾನ ಹಾರಾಟಕ್ಕಾಗಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು ರೂ.347.92 ಕೋಟಿಗಳ (ಜಿ.ಎಸ್.ಟಿ. ಸೇರಿ) ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಚಿವ ಸಂಪುಟದ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿದೆ.

ಕರ್ತವ್ಯಲೋಪ : ಕಂಟ್ರೋಲ್ ರೂಂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಪತ್ರ

ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಆರ್ಥಿಕ, ವಾಣಿಜ್ಯ, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು ವಿಜಯಪುರ ನಗರದಲ್ಲಿ ಗ್ರೀನ್ ಫೀಲ್ಡ್ ದೇಶೀಯ ವಿಮಾನ ನಿಲ್ದಾಣವನ್ನು ಎ.ಟಿ.ಆರ್.72 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಒಟ್ಟು ರೂ.220.00 ಕೋಟಿಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ದಿನಾಂಕ:14.12.2020ರಂದು ಸರ್ಕಾರಿ ಆದೇಶ ಹೊರಡಿಸಲಾಗಿತ್ತು.

ಸೆ.8ರಂದು ಮುಖ್ಯ ಅಭಿಯಂತರರು, ಸಂಪರ್ಕ ಮತ್ತು ಕಟ್ಟಡಗಳು (ದ), ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ತಾಂತ್ರಿಕ ಸಲಹಾ ಮತ್ತು ಅಂದಾಜುಪಟ್ಟಿ ಪರಿಶೀಲನಾ ಸಮಿತಿಯು ಮುಖ್ಯ ಅಭಿಯಂತರರು (ಸಂಪರ್ಕ ಮತ್ತು ಕಟ್ಟಡ) (ಉತ್ತರ), ಲೋಕೋಪಯೋಗಿ ಇಲಾಖೆ, ಧಾರವಾಡರವರು ಸಲ್ಲಿಸಿರುವ 120.00 ಕೋಟಿಗಳ ಹೆಚ್ಚುವರಿ ಅಂದಾಜು ಪಟ್ಟಿಯನ್ನು ಪರಿಶೀಲಿಸಿತು.

ಹೆಚ್ಚುವರಿಯಾಗಿ ಮಂಡಿಸಿರುವ ರೂ.120.00 ಕೋಟಿಗಳ ಮೊತ್ತದ ಅಂಶಗಳು ಪ್ಯಾಕೇಜ್-1ರಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ರನ್-ವೇ ಮತ್ತು ಏಪ್ರಾನ್ ಗೆ ಸಂಬಂಸಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಕಾಮಗಾರಿಗಳನ್ನು ಪ್ಯಾಕೇಜ್-1ರ ಗುತ್ತಿಗೆದಾರರಿಗೆ ನೀಡುವುದು ಸೂಕ್ತವೆಂದು ಅಭಿಪ್ರಾಯಿಸಿರುತ್ತದೆ. ಸುದೀರ್ಘ ಚರ್ಚೆಯ ನಂತರ ಪರಿಷ್ಕೃತ ಅಂದಾಜನ್ನು ಸರ್ಕಾರದ ಅನುಮೋದನೆಯನ್ನು ಪಡೆಯಲು ಸಮಿತಿಯು ಸಹಮತಿಸಿತ್ತು.

Articles You Might Like

Share This Article