ಬೆಂಗಳೂರು,ಜ.26-ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಕೊರೊನಾ ಸೋಂಕು ತಗುಲಿದೆ. ಗುಪ್ತ ಅವರಿಗೆ ಸೋಂಕು ದೃಢಪಟ್ಟಿದ್ದು, ವೈದ್ಯಕೀಯ ಸಲಹೆಯಂತೆ ಅವರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ನನಗೆ ಕೊರೊನಾ ಸೊಂಕು ತಗುಲಿದ್ದು, ನನ್ನೊಂದಿಗೆ ಇತ್ತಿಚೆಗೆ ಸಂಪರ್ಕ ಬಂದಿದ್ದವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಕೊರೊನಾ ತಪಾಸಣೆ ನಡೆಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಗುಪ್ತಾ ಅವರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಹಿರಿಯ ಪೆÇಲೀಸ್ ಅಧಿಕಾರಿಗಳಾದ ಸುಬ್ರಮಣ್ಯೇಶ್ವರ ರಾವ್ ಹಾಗೂ ರವಿಕಾಂತೇಗೌಡ ಅವರೊಂದಿಗೆ ಗಣ ರಾಜ್ಯೋತ್ಯವ ಆಚರಣೆ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು.
ಇದೀಗ ಗುಪ್ತ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳಲ್ಲಿ ಆತಂಕ ಶುರುವಾಗಿದೆ.
ಈ ಮಧ್ಯೆ ಗೌರವ್ ಗುಪ್ತ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍ಸಿಂಗ್ ಅವರು ಇಂದು ಬೆಳಿಗ್ಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜರೋಹಣ ನೆರವೇರಿಸಿದರು.
