ಬೆಂಗಳೂರು,ನ.30- ಚಿಲುಮೆ ಕರ್ಮಕಾಂಡಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾಗಲು ದಿನಗಣನೆ ಆರಂಭವಾಗುತ್ತಿದ್ದಂತೆ ಯಾವುದೇ ಕಾರಣಕ್ಕೂ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಬಾರದು ಒಂದು ವೇಳೆ ಸರ್ಕಾರ ಇಂತಹ ಕಾರ್ಯಕ್ಕೆ ಮುಂದಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ ನೀಡಿದೆ.
ಚಿಲುಮೆ ಸಂಸ್ಥೆಯವರು ಮಾಡಿರುವ ಕರ್ಮಕಾಂಡಕ್ಕೆ ಈಗಾಗಲೇ ದಕ್ಷ ಅಧಿಕಾರಿ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದೆ.
ಇದೀಗ ದಕ್ಷ ಅಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗುವುದು ಎಂಬ ಆರೋಪಗಳು ಕೇಳಿ ಬರುತ್ತಿದೆ.
ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಒಂದು ವೇಳೆ ಸರ್ಕಾರ ಇಂತಹ ಕಾರ್ಯಕ್ಕೆ ಕೈ ಹಾಕಿದರೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲಾ ಮಹಾನಗರ ಪಾಲಿಕೆ ಹಾಗೂ ಬಿಬಿಎಂಪಿಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ನ್ಯಾಯಯುತ ಬೇಡಿಕೆಗಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಅಮೃತ್‍ರಾಜ್ ಎಚ್ಚರಿಕೆ ನೀಡಿದ್ದಾರೆ.
ಅದೇ ರೀತಿ ಚಿಲುಮೆ ಸಂಸ್ಥೆಯವರು ಮಾಡಿರುವ ಕರ್ಮಕಾಂಡ ಐಪಿಸಿ ಸೆಕ್ಷನ್ ವ್ಯಾಪ್ತಿಗೆ ಬರುತ್ತದೆ. ಆದರೆ, ಬಿಬಿಎಂಪಿ ಅಧಿಕಾರಿಗಳನ್ನು ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ ತನಿಖೆ ಮಾಡಿಸಬೇಕು. ಅದನ್ನು ಬಿಟ್ಟು ನಮ್ಮ ವಿರುದ್ಧವೂ ಐಪಿಸಿ ಸೆಕ್ಷನ್ ಬಳಸುವುದನ್ನು ನಮ್ಮ ಸಂಘ ವಿರೋಧಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ದಾಖಲೆ ಇಲ್ಲದ 90 ಲಕ್ಷ ಮೌಲ್ಯದ ಆಭರಣ, 22 ಲಕ್ಷ ಹಣ ವಶಕ್ಕೆ
ಈಗಾಗಲೇ ಪೊಲೀಸರು ಮೂವರು ಆರ್‍ಓಗಳು ಹಾಗೂ ಒಬ್ಬ ಎಆರ್‍ಒ ಅವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಕೆಲವು ಅಧಿಕಾರಿಗಳಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಚಿಲುಮೆ ಹಗರಣದಲ್ಲಿ ಇನ್ನು ಕೆಲ ಅಕಾರಿಗಳನ್ನು ಬಂಸುವ ಸಾಧ್ಯತೆ ಇದೆ. ಇದರ ಜೊತೆಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೂ ಪೊಲೀಸರು ನೋಟೀಸ್ ಜಾರಿ ಮಾಡಿ ವಿಚಾರಣೆಗೊಳಪಡಿಸುವ ಸಾಧ್ಯತೆ ಇರುವುದರಿಂದ ಸರ್ಕಾರ ಅವರನ್ನು ಮುಖ್ಯ ಆಯುಕ್ತರ ಸ್ಥಾನದಿಂದ ವರ್ಗಾವಣೆ ಮಾಡಿ ಅನುಭವಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನಿಸಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ನೌಕರರ ಸಂಘ ತುಷಾರ್ ಗಿರಿನಾಥ್ ಅವರ ಬೆಂಬಲಕ್ಕೆ ನಿಂತಿದೆ.
ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್..?
BBMP, Chief Commissioner, transferred, Employees, Union,