ಬೆಂಗಳೂರು,ಡಿ.17- ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆಯಡಿ 3 ಲಕ್ಷ ಆಸ್ತಿಗಳಿಂದ ಸರಿ ಸುಮಾರು 1,277 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.
ಡಿ. 1 ರ ವರೆಗೆ ಸುಮಾರು 3 ಲಕ್ಷ ಆಸ್ತಿಗಳಿಂದ ಸಂಗ್ರಹಿಸಲಾದ ಬಾಕಿ 1,277 ಕೋಟಿ ರೂ.ಗಳಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ನವಂಬರ್ ಅಂತ್ಯದ ವೇಳೆಗೆ 4284 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹವನ್ನು ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಬಿಬಿಎಂಪಿಯಲ್ಲಿ ಇದೇ ಮೊದಲ ಬಾರಿಗೆ 4000 ಕೋಟಿ ರೂ.ಗಳಿಗೂ ಹೆಚ್ಚು ಆಸ್ತಿ ತೆರಿಗೆ ಸಂಗ್ರಹ ಮಾಡಿ ದಾಖಲೆ ಸೃಷ್ಟಿಸಲಾಗಿದೆ. ಆಸ್ತಿ ತೆರಿಗೆ ಪಾವತಿಸಲು ಮಾರ್ಚ್ ವರೆಗೂ ಸಮಯವಿದ್ದು ಉಳಿದ ಅವಧಿಯಲ್ಲಿ ಬಾಕಿ ಇರುವ ತೆರಿಗೆ ವಸೂಲಿ ಮಾಡುವ ಮೂಲಕ 5000 ಕೋಟಿ ರೂ.ಗಳ ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ.