ಬಾಕಿ ಬಿಲ್‌ ಬಿಡುಗಡೆಗೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಬಂದ್

ಬೆಂಗಳೂರು,ಸೆ.2– ಬಾಕಿ ಇರುವ ಬಿಲ್‌ ಪಾವತಿಗೆ ಒತ್ತಾಯಿಸಿ ಗುತ್ತಿಗೆದಾರರು ಇಂದಿನಿಂದ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಮಾಡಿದ್ದ ಕಾಮಗಾರಿಗಳ ಶೇ.75 ರಷ್ಟು ಬಿಲ್‌ ಅನ್ನು ಪಾವತಿಸಿರುವ ಬಿಬಿಎಂಪಿ ಅಧಿಕಾರಿಗಳು ಬಾಕಿ ಬಿಡುಗಡೆ ಮಾಡಬೇಕಾದ ಶೇ.25ರಷ್ಟು ಬಿಲ್‌ ಪಾವತಿಗೆ ಮೀನಾಮೇಷ ಎಣಿಸುತ್ತಿರುವುದನ್ನು ಖಂಡಿಸಿ ಗುತ್ತಿಗೆದಾರರು ಈ ನಿರ್ಧಾರಕ್ಕೆ ಬಂದಿದ್ದಾರೆ. ಗುತ್ತಿಗೆದಾರರಿಗೆ ಪಾವತಿಸಬೇಕಾದ ಬಿಲ್‌ ಮೊತ್ತ ಬರೋಬ್ಬರಿ 1600 ಕೋಟಿ ಇದೆ. ಕಳೆದ ಎರಡು ವರ್ಷಗಳಿಂದ ಬಿಬಿಎಂಪಿ ಗುತ್ತಿಗೆದಾರರ ಬಿಲ್‌ ಬಾಕಿ ಉಳಿಸಿಕೊಂಡಿದೆ. … Continue reading ಬಾಕಿ ಬಿಲ್‌ ಬಿಡುಗಡೆಗೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಬಂದ್