ಬೆಂಗಳೂರು, ನ.8- ಬಿಬಿಎಂಪಿ ಯಲ್ಲಿ ನಡೆದಿದೆ ಎನ್ನಲಾದ 10 ಸಾವಿರ ಕೋಟಿ ರೂ.ಗಳ ಬಿಗ್ ಸ್ಕ್ಯಾಮ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ದೂರು ನೀಡಲಾಗಿದೆ. ಬಿಬಿಎಂಪಿಯಲ್ಲಿ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿ ದ್ದಾರೆ ಆದರೂ ಸಂಬಂಧಪಟ್ಟವರು ಅವರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದರಿಂದ ಈ ವಿಚಾರದಲ್ಲಿ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಎಂಬುವರು ಪ್ರಧಾನಿ ಕಾರ್ಯಲಯಕ್ಕೆ ಪತ್ರ ಬರೆದಿದ್ದಾರೆ.
ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ
ಬೆಂಗಳೂರಿನಲ್ಲಿ ರಾಜಕಾಲುವೆ ನಿರ್ವಹಣೆ ನೆಪದಲ್ಲಿ ಹಣ ದುರು ಪಯೋಗದ ಮೆಗಾ ಸ್ಕ್ಯಾಮ್ ಬಗ್ಗೆ ಮೋದಿಯಂಗಳಕ್ಕೆ ದೂರು ಸಲ್ಲಿಸಲಾಗಿದೆ. ಕಳೆದ 10 ವರ್ಷ ದಿಂದ ಬಿಬಿಎಂಪಿಯಲ್ಲಿ ರಾಜ ಕಾಲುವೆ ದುರಸ್ತಿ, ನಿರ್ವಹಣೆ ಹೆಸರಲ್ಲಿ 10 ಸಾವಿರ ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಪ್ರಧಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವೀರೇಶ್ ತಿಳಿಸಿದ್ದಾರೆ.
ಹತ್ತು ಸಾವಿರ ಕೋಟಿ ಹಣ ವಿನಿಯೋಗ ಮಾಡಿ ಅಭಿವೃದ್ಧಿ ಕಾರ್ಯ ನಡೆಸಿದ್ದರೆ ಒಂದು ಸಣ್ಣ ಮಳೆಗೆ ನಗರ ಅಧ್ವಾನಾವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕಾಲುವೆ ನಿರ್ವಹಣೆಗಾಗಿ ಕೋಟಿ ಕೋಟಿ ಹಣ ಮೀಸಲಿಡುತ್ತವೆ ಆದರೆ, ಹಣ ವಿನಿಯೋಗವಾಗುತ್ತಿಲ್ಲ ಬಿಬಿಎಂಪಿಯ ಈ ಕರ್ಮಕಾಂಡದ ಬಗ್ಗೆ ಈಗಾಗಲೇ ಸಿಎಜಿ ರಿಪೋರ್ಟ್ ನಲ್ಲಿಯೂ ಬಹಿರಂಗಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.
ಸಾವಿರಾರು ಕೋಟಿ ರೂ.ಗಳ ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಇಡಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯಲ್ಲಿ ನಡೆಯುತ್ತಿ ರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖಾ ಸಂಸ್ಥೆ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ಎಸ್‍ಐಟಿ ಅಕಾರಿಗಳಿಗೆ ದೂರು ನೀಡಬಹುದು ಆದರೂ ಕೆಲವರು ಪ್ರಧಾನ ಮಂತ್ರಿಗಳಿಗೆ ದೂರು ನೀಡಿದ್ದಾರೆ.
ಅವರು ಏನು ದೂರು ನೀಡಿದ್ದಾರೆ ಎನ್ನುವುದು ನಮಗೆ ತಿಳಿದಿಲ್ಲ. ಪ್ರಧಾನಿ ಕಾರ್ಯಲಯದಿಂದ ಬರುವ ಆದೇಶದಂತೆ ಮುಂದಿನ ಕ್ರಮ ವಹಿಸಲಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.