BREAKING : ಬಿಬಿಎಂಪಿ ಚುನಾವಣೆ ವಿಚಾರಣೆ ಜೂ.28ಕ್ಕೆ ಮುಂದೂಡಿದ ಸುಪ್ರೀಂ

Social Share

ನವದೆಹಲಿ, ಜು.26- ಬಹು ನಿರೀಕ್ಷಿತ ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಜು.28ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‍ನ ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಅಭಯ್ ಎಸ್.ಓಕಾ ಮತ್ತು ಜೆ.ಪಿ.ಪರ್ದಿವಾಲ ಅವರಿದ್ದ ಪೀಠ ಸಾಲಿಸಿಟರ್ ಜನರಲ್ ಗೈರಾದ ಹಿನ್ನೆಲೆಯಲ್ಲಿ ಮುಂದೂಡಿತು.

ಸಾಲಿಸಿಟರ್ ಜನರಲ್ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬೆಳಗ್ಗೆ 12.30ಕ್ಕೆ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ನ್ಯಾಯಾೀಧಿಶರು ವಿಚಾರಣೆಯನ್ನು ಮುಂದೂಡಿದರು.

ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೀಡಿದ್ದ 8 ವಾರಗಳ ಗಡುವು ಮುಕ್ತಾಯಗೊಂಡಿದ್ದು, ವಾರ್ಡ್ ಪುನರ್ ವಿಂಗಡಣೆ, ವಾರ್ಡ್‍ವಾರು ಮೀಸಲಾತಿಯನ್ನು ಈಗಾಗಲೇ ಪ್ರಕಟಿಸಿದೆ. ಮತ್ತೊಂದೆಡೆ ಕರ್ನಾಟಕ ಸರ್ಕಾರವು ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೋರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬಿಬಿಎಂಪಿ ವಾರ್ಡ್‍ಗಳ ಪುನರ್ ವಿಂಗಡಣೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಅಂತಿಮಗೊಳಿಸಲು ಕನಿಷ್ಠ ನಾಲ್ಕು ವಾರಗಳ ಸಮಯಾವಕಾಶವನ್ನು ತಮ್ಮ ವಕೀಲರ ಮೂಲಕ ಕೇಳುವ ಸಾಧ್ಯತೆಯಿದೆ.

ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿರುವ ಮಾಜಿ ಕಾಪೆರ್ರೇಟರ್‍ಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಬಿಎಂಪಿ ಮಾಜಿ ಸದಸ್ಯ ಶಿವರಾಜು, ಅಬ್ದುಲ್ ವಾಜೀದ್ ಅವರಿಂದ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿ ಶೀಘ್ರ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬುದು ಅರ್ಜಿದಾರರ ವಾದವಾಗಿದೆ.

Articles You Might Like

Share This Article