ಮುಂಬರುವ ಬಿಬಿಎಂಪಿ ಚುನಾವಣೆ ಸಿದ್ಧತೆಗೆ ಜೆಡಿಎಸ್ ಮಹತ್ವದ ಸಭೆ

Spread the love

ಬೆಂಗಳೂರು ಜೂ. 9- ಮುಂಬರುವ ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತಂತೆ ನಾಳೆ ಜೆಡಿಎಸ್ ಮಹತ್ವದ ಸಭೆ ನಡೆಸಲಿದೆ. ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರುಗಳ ಸಭೆಯನ್ನು ಜೆಪಿ ಭವನದಲ್ಲಿ ಕರೆಯಲಾಗಿದೆ. ನಾಳೆ ಬೆಳಿಗ್ಗೆ 10.30 ಗಂಟೆಗೆ ಮಾಜಿ ರಾಜ್ಯಸಭಾ ಸದಸ್ಯರಾದ ಕುಪೇಂದ್ರ ರೆಡ್ಡಿ ಹಾಗೂ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್. ಮಂಜುನಾಥ್ ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬಿಬಿಎಂಪಿ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವುದು, ಸಂಭವನೀಯ ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಸಂಘಟನೆ, ಚುನಾವಣಾ ಕಾರ್ಯತಂತ್ರ, ಕೋವಿಡ್ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮೊದಲಾದ ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ‌.

ಪಕ್ಷ ಅಧಿಕಾರದಲ್ಲಿದ್ದಾಗ ಬೆಂಗಳೂರು ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments