ಬೆಂಗಳೂರು,ಫೆ.23- ಬರುವ ಮಾರ್ಚ್ ಒಂದರಿಂದ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರು ಅರ್ನಿಷ್ಠಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ವೇತನ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಪಾಲಿಕೆ ಸಿಬ್ಬಂದಿ ಕುಟುಂಬ ವರ್ಗದವರಿಗೆ ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‍ರಾಜ್ ತಿಳಿಸಿದ್ದಾರೆ.
ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ನಾವು ಈಗಾಗಲೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಮಾ.1ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ಅರ್ನಿಷ್ಟಾವ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಇತ್ತಿಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಮಾ.1ರಿಂದ ಅರ್ನಿಷ್ಠಾವ ಮುಷ್ಕರ ನಡೆಸುವುದಕ್ಕೆ ನಮ್ಮ ಸಂಘವೂ ಬೆಂಬಲ ವ್ಯಕ್ತಪಡಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಹಾವೇರಿ : ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಸರ್ಕಾರವು ಈಡೇರಿಸಬೇಕಾದ ಪ್ರಮುಖ ಬೇಡಿಕೆಗಳು:-
ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅೀಧಿನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕøತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40 ರಷ್ಟು ಫಿಟ್‍ಮೆಂಟ್ ಸೌಲಭ್ಯವನ್ನು ದಿನಾಂಕ:01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.
ರಾಜ್ಯದ ಎನ್‍ಪಿಎಸ್ ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‍ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ.
ಈಗಾಗಲೇ ಪಂಜಾಬ, ರಾಜಸ್ಥಾನ, ಛತ್ತೀಸ್‍ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್‍ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
7ನೇ ವೇತನ ಆಯೋಗ ಮಧ್ಯಂತರ ವರದಿ ಅನುಷ್ಠಾನ
ಹಲವಾರು ವರ್ಷಗಳಿಂದ ಮೇಲ್ಕಂಡ ಸಂಘದ ವತಿಯಿಂದ ನೀಡಿರುವ ಮನವಿ ಪತ್ರ ಹಾಗೂ ದಿನಾಂಕ:09-02-2023ರಂದು ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸದ ಇರುವ ಕಾರಣ ನಮ್ಮ ಸಂಘದ ವತಿಯಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಲು ಈ ಮೂಲಕ ಕೋರಲಾಗಿದೆ ಎಂದು ಎ.ಅಮೃತ್ ರಾಜ್ ತಿಳಿಸಿದರು.
BBMP, employees, strike, March 1,