ಬಿಬಿಎಂಪಿ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ

Social Share

ಬೆಂಗಳೂರು,ಜ.30- ಬಿಬಿಎಂಪಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಎದುರಾಗಿದೆ. ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂಬು ಬಿಬಿಎಂಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ, ಅಂತಹ ಕೇಂದ್ರಗಳಿಗೆ ತೆರಳಿದರೆ ಅಲ್ಲಿ ಯಾವುದೇ ಔಷಧಿದೋಪಚಾರ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಇರುವುದನ್ನು ಒಪ್ಪಿಕೊಂಡಿರುವ ವಿಶೇಷ ಆಯುಕ್ತ ತ್ರಿಲೋಕ್‍ಚಂದ್ರ ಅವರು ಅದಷ್ಟು ಬೇಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲವೊಂದು ಔಷಧಿ ಕೊರತೆ ಇದೆ. ಇಂತಹದ್ದೇ ಔಷಧಿ ಸಿಗುತ್ತಿಲ್ಲ ಎಂದು ಹೇಳಲು ಬರುವುದಿಲ್ಲ. ಆದರೆ, ಅದಷ್ಟು ಬೇಗ ಎಲ್ಲ ಔಷಧಿ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆಯ ಗುಸುಗುಸು

ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳಿಗೆ ಅಗತ್ಯವಿರುವ ಕೆಲವೊಂದು ಔಷಧಿಗಳನ್ನು ಸ್ಥಳೀಯ ಜನೌಷಧಿ ಕೇಂದ್ರಗಳಿಂದ ಖರೀದಿ ಮಾಡುವಂತೆ ಸೂಚಿಸಿದ್ದೇವೆ ಇದರ ಜತೆಗೆ ಮುಂಬರು ಬಜೆಟ್‍ನಲ್ಲಿ ಔಷಧಿ ಖರೀದಿಗೆ ಹಣ ಮೀಸಲಿಡುವಂತೆ ನಾವು ಮನವಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಆಯಾಆಯಾ ಪಿಹೆಚ್ ಸಿ ಸೆಂಟರ್ ಗಳಲ್ಲಿ ಕೆಲ ಔಷಧಿ ಇರುಬಹುದು ಕೆಲ ಕಡೆ ಕೆಲವು ಔಷಧಿಗಳು ಸಿಗುತ್ತಿಲ್ಲ. ಶೀಘ್ರದಲ್ಲೇ ಎಲ್ಲ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ನಮ್ಮ ಕ್ಲಿನಿಕ್ ಓಪನ್ ಆಗದ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ತಡವಾಗಿದೆ. ಫೆ.7ಕ್ಕೆ ನಾವು ನಮ್ಮ ಕ್ಲಿನಿಕ್‍ಗಳನ್ನು ತೆರೆಯಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಣೆ ನೀಡಿದರು.

BBMP, Health Centres, Medicines, Shortage,

Articles You Might Like

Share This Article