ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲು ಫೀಲ್ಡಿಗಿಳಿದ ಬಿಬಿಎಂಪಿ ಮಾರ್ಷಲ್‍ಗಳು

Social Share

ಬೆಂಗಳೂರು,ಡಿ.23- ಕೊರೊನಾ ಆತಂಕ ಕಾಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರಿಗೆ ಮಾಸ್ಕ್ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಸಧ್ಯಕ್ಕೆ, ಒಳಾಂಗಣ ಸಮಾರಂಭಗಳಲ್ಲಿ ಮಾತ್ರ ಮಾಸ್ಕ್ ಬಳಕೆ ಮಾಡುವುದನ್ನು ಸರ್ಕಾರ ಕಡ್ಡಾಯ ಮಾಡಿರುವುದರಿಂದ ಬಿಬಿಎಂಪಿ ಹೊರ ಭಾಗದಲ್ಲೂ ಜನರು ಮಾಸ್ಕ್ ಧರಿಸುವ ಮೂಲಕ ಮಹಾಮಾರಿ ಹಾವಳಿಯಿಂದ ತಪ್ಪಿಸಿಕೊಳ್ಳಿ ಎಂಬ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನಿಸಿದೆ. ಜನರಲ್ಲಿ ಮಾಸ್ಕ್ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮಾರ್ಷಲ್‍ಗಳನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಸಾರ್ವಜನಿಕ ಪ್ರದೇಶಗಳಲಿ ಓಡಾಡುವ ಜನರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲು 441 ಮಾರ್ಷಲ್‍ಗಳನ್ನು ನಿಯೋಜಿಸಲಾಗಿದೆ. ನಿಯೋಜನೆಗೊಂಡಿರುವ ಮಾರ್ಷಲ್‍ಗಳು ಜನಸಂದಣಿ ಪ್ರದೇಶಗಳು, ಬಸ್, ರೈಲು ನಿಲ್ದಾಣಗಳಲಿ ಸಂಚರಿಸಿ ಜನರಿಗೆ ಮಾಸ್ಕ್ ಧರಿಸುವಂತೆ ಮನವೊಲಿಕೆ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಬೆಂಗಳೂರು ವಿವಿ ಆವರಣದಲ್ಲಿ ಮಾಸ್ಕ್ ಕಡ್ಡಾಯ

ಆರಂಭದಲ್ಲಿ ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ದಂಡ ವಿಧಿಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜನರನ್ನು ಪ್ರೀತಿ ವಿಶ್ವಾಸದಿಂದ ಮಾತನಾಡಿಸಿ, ಅವರಿಗೆ ಮಾಸ್ಕ್ ಧರಿಸುವುದರ ಬಗ್ಗೆ ಜಾಗೃತಿ ಮೂಡಿಸುವಂತೆಯೂ ಸೂಚನೆ ನೀಡಲಾಗಿದೆ.

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಗುಂಪು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಾರದು ಎಂಬ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ 441 ಮಾರ್ಷಲ್‍ಗಳಿಗೆ ಬಿಬಿಎಂಪಿ ಆರೋಗ್ಯ ವಿಭಾಗದ 800ಕ್ಕೂ ಹೆಚ್ಚು ಸಿಬ್ಬಂದಿಗಳು ಸಾಥ್ ನೀಡಲಿದ್ದಾರೆ.

ಬಿಜೆಪಿಗೆ ಬಿಸಿ ತುಪ್ಪವಾದ ಫ್ಯಾಮಿಲಿ ಪಾಲಿಟಿಕ್ಸ್

ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಂಚರಿಸುತ್ತ ಸಾರ್ವಜನಿಕರಿಗೆ ಕೊರೊನಾ ಮಾರ್ಗಸೂಚಿ ಅನುಸರಿಸುವಂತೆ ಸಲಹೆ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

BBMP marshals, awareness, public mask, Bengaluru,

Articles You Might Like

Share This Article