ರಾಜ್ಯಾದ್ಯಂತ ಶೀಘ್ರದಲ್ಲೇ ‘ನಮ್ಮ ಕ್ಲಿನಿಕ್’ ಪ್ರಾರಂಭ : ಸಚಿವ ಸುಧಾಕರ್

Social Share

ಬೆಂಗಳೂರು,ಸೆ.17-ಬಿಬಿಎಂಪಿ ವ್ಯಾಪ್ತಿಯಲ್ಲಿ ರಂಭವಾಗಿರುವ ನಮ್ಮ ಕ್ಲಿನಿಕ್ ಚಿಕಿತ್ಸಾ ಕೇಂದ್ರಗಳನ್ನು ರಾಜ್ಯಾದ್ಯಂತ ಶೀಘ್ರದಲ್ಲೇ ಪ್ರಾರಂಭ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದರು. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿದ್ದ ರಕ್ತದಾನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್‍ಗಳನ್ನು ಪ್ರಾರಂಭಿಸಲಾಗಿದೆ. ಇದರ ಸಾಧಕಬಾಧಕಗಳನ್ನು ನೋಡಿಕೊಂಡು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 243 ಕ್ಲಿನಿಕ್‍ಗಳು ಪ್ರಾರಂಭವಾಗಲಿವೆ. ಇವು ವಾರ್ಡಿಗೊಂದರಂತೆ ಕಾರ್ಯ ನಿರ್ವಹಿಸಲಿವೆ. ರಾಜ್ಯಾದ್ಯಂತ 438 ಕ್ಲಿನಿಕ್‍ಗಳನ್ನು ಪ್ರಾರಂಭಿಸಲಾಗುವುದು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿ ಅಂತಿಮಗೊಳಿಸಲಿದ್ದೇವೆ ಎಂದರು.

ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಸಿಗಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಆರೋಗ್ಯ ಮತ್ತು ಶಿಕ್ಷಣ ಸುಧಾರಣೆಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೇವೆ. ಇದಕ್ಕೆ ಆರ್ಥಿಕ ನೆರವು ಕೊಟ್ಟು ಮೂಲಭೂತ ಸೌಕರ್ಯಗಳ ಸುಧಾರಣೆಗೂ ಸುಧಾಕರ್ ಮಾಹಿತಿ ನೀಡಿದರು.

ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯ ನಿರ್ವಹಿಸುತ್ತಿವೆ. ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯನಿರ್ವಹಿಸುತ್ತಾರೆ. ಉಚಿತ ತಪಾಸಣೆ ಮತ್ತು ಉಚಿತ ಔಷಧ ವಿತರಣೆ ಮಾಡಲಾಗುತ್ತದೆ. ಒಟ್ಟು 12 ತರಹದ ಆರೋಗ್ಯ ಸೇವೆಗಳು ಹಾಗೂ 14 ವಿಧದ ಪ್ರಯೋಗ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಇ-ಸಂಜೀವಿನಿ ಹಾಗೂ ಟೆಲಿ ಕೌನ್ಸೆಲಿಂಗ್ ಮೂಲಕ ಕೊಡಿಸುವ ವ್ಯವಸ್ಥೆ ಇರುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರದ ಅನುದಾನದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದ್ದು, ಪ್ರತಿ ಕ್ಲಿನಿಕ್‍ಗೆ ವಾರ್ಷಿಕ 36 ಲಕ್ಷ ರು. ನೀಡಲಾಗುತ್ತದೆ. ಈ ಮೊತ್ತದಲ್ಲಿ ಸಿಬ್ಬಂದಿ ವೇತನ, ಕ್ಲಿನಿಕ್ ನಿರ್ವಹಣೆ, ಖಾಸಗಿ ಕಟ್ಟಡವಾಗಿದ್ದರೆ ಬಾಡಿಗೆ ಸೇರಿದಂತೆ ಎಲ್ಲವನ್ನೂ ನಿರ್ವಹಣೆ ಮಾಡಬೇಕು. ರಾಜ್ಯ ಸರ್ಕಾರವು ಈಗಾಗಲೇ ನಮ್ಮ ಕ್ಲಿನಿಕ್‍ಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.

ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ಈ ಹಿಂದೆ ಆರ್ಥಿಕ ಇಲಾಖೆಯನ್ನು ತಿರಸ್ಕರಿಸಿತ್ತು. ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರದ ಪ್ರತಿಯೊಂದು ಪ್ರಸ್ತಾನೆಗೆ ಆರ್ಥಿಕ ಇಲಾಖೆ ಅನುಮತಿ ನೀಡುವುದಿಲ್ಲ. ಆರ್ಥಿಕ ಇಲಾಖೆ. ಆರ್ಥಿಕ ಇಲಾಖೆಗೆ ಮನವರಿಕೆ ಮಾಡಿಕೊಟ್ಟು ಮತ್ತೆ ಪ್ರಸ್ತಾವನೆ ಕಳಿಸಿದ್ದೇವೆ.ಮುಖ್ಯಮಂತ್ರಿ ಗಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಬದ್ದರಾಗಿದ್ದಾರೆ ಎಂದರು.

Articles You Might Like

Share This Article