Tuesday, February 27, 2024
Homeಬೆಂಗಳೂರುಹೊಸವರ್ಷದಂದು 8 ಮೆಟ್ರಿಕ್ ಟನ್ ಕಸ ತೆರವು ಮಾಡಿದ ಬಿಬಿಎಂಪಿ

ಹೊಸವರ್ಷದಂದು 8 ಮೆಟ್ರಿಕ್ ಟನ್ ಕಸ ತೆರವು ಮಾಡಿದ ಬಿಬಿಎಂಪಿ

ಬೆಂಗಳೂರು,ಜ.1-ಹೊಸವರ್ಷ ಆಚರಣೆ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿಸಾಡಿದ್ದ ಕಸ-ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸುವಲ್ಲಿ ಬಿಬಿಎಂಪಿ ಯಶಸ್ವಿಯಾಗಿದೆ. ನಗರದಲ್ಲಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 8 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲಾಗಿದೆ.

ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‍ಮಂಡ್ ರಸ್ತೆ, ಸೇಂಟ್ ಮಾಕ್ಸರ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.30ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 6.30ರ ವೇಳೆಗೆ ಪೂರ್ಣಗೊಳಿಸಿ ಸುಮಾರು 8 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದರು. ಸ್ಥಳದಲ್ಲಿ 1 ಕಾಂಪ್ಯಾಕ್ಟರ್ ಹಾಗೂ 7 ಆಟೋ ಟಿಪ್ಪರ್ ಗಳಿದ್ದವು.

ವಿಮಾನಗಳಲ್ಲಿ ಚಿನ್ನ ಕಳ್ಳಸಾಗಣೆ: 2 ಕೋಟಿ ಮೌಲ್ಯದ ಚಿನ್ನ ಜಪ್ತಿ

ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮಧ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಸಲಾಗಿದೆ. ಪುನರ್ ಬಳಕೆಯ ಸುನಾರು 2 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ.
ಸಚ್ಚತಾ ಕಾರ್ಯದಲ್ಲಿ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಪ್ಪುರಾಜ, ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

Latest News