ಬೆಂಗಳೂರು,ಡಿ.10- ಕಳೆದ ಹಲವಾರು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಬಿಬಿಎಂಪಿ ಕಂದಾಯ ಇಲಾಖೆ ನೌಕರರ ವರ್ಗಾವಣೆಗೆ ಸಿದ್ದತೆ ನಡೆಸಲಾಗಿದೆ. ಬಿಬಿಎಂಪಿ 198 ವಾರ್ಡ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ದೀಪಕ್ ತಿಳಿಸಿದ್ದಾರೆ.
ಮುಂದಿನ ವರ್ಷದ ಮೇ 24ಕ್ಕೆ ರಾಜ್ಯ ವಿಧಾನಸಭೆಯ ಅವ ಅಂತ್ಯವಾಗಲಿದ್ದು, ಕೇಂದ್ರ ಚುನಾವಣಾ ಆಯೋಗ ಈಗಾಗಲೆ ಚುನಾವಣಾ ಸಿದ್ದತೆ ಆರಂಭಿಸಿದ್ದು, ರಾಜ್ಯ ಸರ್ಕಾರಿ ಇಲಾಖೆ ನೌಕರರು ಮೂರು ವರ್ಷದಿಂದ ಒಂದೆ ಕಡೆ ಸೇವೆ ಸಲ್ಲಿಸುತ್ತಿದ್ದರೆ.
ಅಂತಹವರನ್ನು ಬೇರೆಡೆ ವರ್ಗಾವಣೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.
ಅದರಲ್ಲೂ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ನೌಕರರು ಯಾವುದೇ ಪಕ್ಷ ಅಥವಾ ರಾಜಕೀಯ ನಾಯಕರ ಜೊತೆ ಸಂಬಂಧ ಇಟ್ಟುಕೊಂಡಿದ್ದರೆ ಅಂತವರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡುವಂತೆಯೂ ಸೂಚಿಸಲಾಗಿದೆ.
ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ಸಾಕೇತ್
ಕೇಂದ್ರ ಚುನಾವಣಾ ಅಯೋಗದ ಈ ಅದೇಶದ ಬೆನ್ನಲ್ಲೇ ಬಿಬಿಎಂಪಿ ಆಡಳಿತದಲ್ಲಿ ಭರ್ಜರಿ ಸರ್ಜರಿ ನಡೆಸಲಾಗುತ್ತಿದೆ. ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪಕ್ಕೆ ಗುರಿಯಾಗಿರುವ ಚಿಲುಮೆ ಸಂಸ್ಥೆ ಜೊತೆ ಕೆಲ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಪೊಲೀಸರು ಬಂಧಿಸಿದ್ದಾರೆ.
ಇದರ ಜೊತೆಗೆ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿ
ಬಿಬಿಎಂಪಿಯ 198 ವಾರ್ಡಗಳಲ್ಲಿ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲುನಿತೀಶ್ ವೈಫಲ್ಯ ಕಾರಣ : ಪ್ರಶಾಂತ್
ಹೀಗಾಗಿ ಕಳೆದ ಮೂರು ವರ್ಷಗಳಿಂದ ಒಂದೇ ವಾರ್ಡ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಟ್ಟಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವ ಬಿಬಿಎಂಪಿಯ ಕಂದಾಯಾಧಿಕಾರಿಗಳಿಗೆ ಸ್ಥಳೀಯ ರಾಜಕೀಯ ಮುಖಂಡರುಗಳ ನಂಟಿರುವುದು ಹೊಸದೆನಲ್ಲ. ಹೀಗಾಗಿ ಕಂದಾಯ ಇಲಾಖೆ ನೌಕರರ ವರ್ಗಾವಣೆಯನ್ನು ಅದಷ್ಟು ಶೀಘ್ರ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.
BBMP, officers, Transfer, Election Commission,