ಬೆಂಗಳೂರು,ಅ.28- ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರದಲ್ಲಿ ನಿರ್ಮಿಸುತ್ತಿದ್ದ 40 ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ. ಮಹದೇವಪುರ ವಲಯದಲ್ಲಿ ನಿರ್ಮಾಣಗೊಳ್ಳುತ್ತಿದ್ದ 40 ಕ್ಕೂ ಹೆಚ್ಚು ಅಧಿನಕೃತ ಕಟ್ಟಡಗಳಿಗೆ ಬಿಬಿಎಂಪಿ ಈಗಾಗಲೇ ನೋಟೀಸ್ ಜಾರಿ ಮಾಡಿದ್ದು, ಕೂಡಲೇ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿದೆ.
ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರ ವಲಯದ ವೈಟ್ ರೋಸ್ ಲೇಔಟ್ 40ಕ್ಕೂ ಹೆಚ್ಚು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘಟನೆಗಳು ಡಿಸಿಎಂ ಹಾಗೂ ಸಿಎಂ ಗೆ ದೂರು ನೀಡಿದ್ದರೂ ಈ ಕುರಿತಂತೆ ಪರಿಶೀಲನೆ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರು ಸೂಚನೆ ಮೇರೆಗೆ ಬಿಬಿಎಂಪಿ ಅಧಿಕಾರಿಗಳು 40 ಕಟ್ಟಡಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.
ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ
ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವ ಬಿಲ್ಡರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಕುಮಾರ್ ಅವರ ಆದೇಶದನ್ವಯ ಮಹದೇವಪುರ ಜಂಟಿ ಅಯುಕ್ತೆ ದಾಕ್ಷಾಯಿಣಿ ಅವರು ನೋಟೀಸ್ ನೀಡಿದ್ದಾರೆ.
ಪಿಜಿ ಸೇರಿದಂತೆ ವಸತಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಸುಳ್ಳು ಮಾಹಿತಿ ನೀಡಿ ಅಕ್ರಮ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ನೀರಿನ ಸಂಪರ್ಕ ಪಡೆಯಲಾಗಿರುವುದು ಹಾಗೂ ಬಿಬಿಎಂಪಿಯಿಂದ ನಕ್ಷೆ ಮಂಜೂರು ಮಾಡಿಸಿಕೊಳ್ಳದಿರುವುದು ದಾಖಲೆ ಪರಿಶೀಲನೆ ವೇಳೆ ಕಂಡು ಬಂದಿದೆ..