ಬೆಂಗಳೂರು, ಜು. 3- ಒಳ ಮೀಸಲಾತಿ ಸ್ಟಿಕರ್ ಅಳವಡಿಕೆ ಸಂದರ್ಭದಲ್ಲಿ ಮನೆ ಮಾಲಿಕರ ಮೇಲೆ ಹಲ್ಲೆ ನಡೆಸಿದ್ದ ಮೂವರು ಬಿಬಿಎಂಪಿ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಂದಾಯ ವಸೂಲಿಗಾರರಾದ ಸೇಂದಿಲ್ ಕುಮಾರ್, ಪೆದ್ದರಾಜು ಹಾಗೂ ರೆವಿನ್ಯೂ ಇನ್‌್ಸಪೆಕ್ಟರ್ ರಮೇಶ್ ಅಮಾನತುಗೊಂಡ ಬಿಬಿಎಂಪಿ ನೌಕರರಾಗಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಚಿಕ್ಕಕಲ್ಲಸಂದ್ರ ವಾರ್ಡ್‌ನ ಸಾರ್ವಭೌಮನಗರದಲ್ಲಿ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ದೇ ಅಲ್ಲದೆ ಅದನ್ನು ಪ್ರಶ್ನಿಸಿದ್ದ ಮನೆ ಮಾಲೀಕ ನಂದೀಶ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದರು.
ಬಿಬಿಎಂಪಿ ಸಿಬ್ಬಂದಿಗಳ ಈ ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹೀಗಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ರಾವ್ ಆದೇಶ ಹೊರಡಿಸಿದ್ದಾರೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ