ಬೆಂಗಳೂರು, ಜೂ.30 ಮರದ ಕೊಂಬೆ ಬಿದ್ದು ಮೃತಪಟ್ಟ ಅಕ್ಷಯ್ ಕುಟುಂಬದವರು ನೀಡಿರುವ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಾವು ನೀಡಿರುವ ದೂರನ್ನು ವಾಪಸ್ ಪಡೆದುಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅಕ್ಷಯ್ ಸಹೋದರ ಬೆನಕರಾಜ್ ಆರೋಪಿಸಿದ್ದಾರೆ.
ಮರ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ನ ಆಸ್ಪತ್ರೆ ಖರ್ಚನ್ನ ಸಂಪೂರ್ಣ ನೋಡಿಕೊಳ್ಳುತ್ತೇವೆ ಎಂದು ಬಿಬಿಎಂಪಿಯ ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ಬಿಎಲ್ ಜಿ ಸ್ವಾಮಿ ಭರವಸೆ ನೀಡಿದ್ದರು. ಆದರೆ, ಇದೀಗ ಕುಟುಂಬಸ್ಥರು ಖರ್ಚು ಮಾಡಿದ ಹಣವನ್ನ ವಾಪಸ್ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಕ್ಷಯ್‌ನನ್ನು ಉಳಿಸಿಕೊಳ್ಳಲು 1,68,451 ಖರ್ಚು ಮಾಡಿದ್ದೇವೆ ನಾವು ಮಾಡಿರುವ ಖರ್ಚಿಗೂ ಬಿಬಿಎಂಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಪತ್ರದಲ್ಲಿ ಬರೆದುಕೊಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾವು ಹನುಮಂತನಗರ ಠಾಣೆಯಲ್ಲಿ ಅಕ್ಷಯ್ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ಕೊಟ್ಟಿದ್ದ ದೂರನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ