Saturday, May 4, 2024
Homeಬೆಂಗಳೂರುಬೆಂಗಳೂರಲ್ಲಿ ಮತ್ತೆ ಜೆಸಿಬಿಗಳ ಘರ್ಜಿನೆ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶುರು

ಬೆಂಗಳೂರಲ್ಲಿ ಮತ್ತೆ ಜೆಸಿಬಿಗಳ ಘರ್ಜಿನೆ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶುರು

ಬೆಂಗಳೂರು,ಡಿ.2- ಇನ್ನು ಹದಿನೈದು ದಿನಗಳ ಒಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಕೆಲ ದಿನಗಳ ಹಿಂದೆ ನ್ಯಾಯಾಲಯ ರಾಜಕಾಲುವೆ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ರಾಜಕಾಲುವೆ ಒತ್ತುವರಿ ತೆರವು ಕುರಿತಂತೆ ನಿನ್ನೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆಯುಕ್ತರು ನಾಳೆಯಿಂದಲೇ ಒತ್ತುವರಿ ತೆರವು ಕಾರ್ಯ ಆರಂಭಿಸಿ ಡಿ.15ರೊಳಗೆ ಪೂರ್ಣಗೊಳಿಸುವಂತೆ ಆದೇಶ ನೀಡಿದ್ದಾರೆ.
ಒತ್ತುವರಿ ತೆರವು ಮಾಡಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಮರೋಪಾದಿಯಲ್ಲಿ ಒತ್ತುವರಿ ತೆರವು ಕಾರ್ಯಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಯುಕ್ತರು ತಿಳಿಸಿದರು.

ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ

ನಗರದಲ್ಲಿ ಒಟ್ಟು ಹೊಸದಾಗಿ ರಾಜಕಾಲುವೆ ಒತ್ತುವರಿ ಮಾಡಿರೋ ಕಟ್ಟಡಗಳನ್ನು ಪತ್ತೆ ಹಚ್ಚಿ ತೆರವು ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು. ನ್ಯಾಯಾಲಯದ ಆದೇಶದ ಮೇರೆಗೆ ಇಂದಿನಿಂದಲೇ ಒತ್ತುವರಿ ತೆರವು ಕಾರ್ಯಚರಣೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

RELATED ARTICLES

Latest News