ಮತ್ತೊಂದು ಕೊರೊನಾ ಅಲೆ ಎದುರಿಸಲು ಬಿಬಿಎಂಪಿ ಸಿದ್ದತೆ

Social Share

ಬೆಂಗಳೂರು,ಡಿ.24- ಚೀನಾ ಮತ್ತಿತರ ದೇಶಗಳಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಹಾಮಾರಿ ಕೊರೊನಾದ ಆತಂಕ ಎಲ್ಲೆಡೆ ಕಂಡು ಬರುತ್ತಿದ್ದು, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.

ಸಿಲಿಕಾನ್ ಸಿಟಿಗೆ ಪ್ರತಿನಿತ್ಯ ದೇಶ, ವಿದೇಶಗಳಲ್ಲಿ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಇಲ್ಲಿನ ಜನ ಬೆಚ್ಚಿಬಿದ್ದಿರುವುದರಿಂದ ಮೊದಲ ಹಂತದಲ್ಲಿ ಬಿಬಿಎಂಪಿಯಿಂದ ಹೆಮ್ಮರಿ ಕಟ್ಟುಹಾಕಲು ಸಿದ್ದತೆ ಆರಂಭವಾಗಿದೆ.
ಬೆಂಗಳೂರು ಗಡಿ ಭಾಗಗಳಲ್ಲಿ ದಿನದ 24 ಗಂಟೆ ಕಟ್ಟೆಚ್ಚರ ವಹಿಸಲಾಗಿದೆ. ಮೊಬೈಲ್ ಟೆಸ್ಟಿಂಗ್ ಸೆಂಟರ್‍ಗಳನ್ನು ಪುನರಾರಂಭಿಸಲಾಗಿದ್ದು, ಮೊಬೈಲ್ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ವಿದೇಶಿ ಹಾಗೂ ಹೊರ ರಾಜ್ಯಗಳ ವಿದ್ಯಾರ್ಥಿಗಳು ತಂಗಿರುವ ಹಾಸ್ಟೆಲ್ ಮತ್ತು ಪಿಜಿಗಳ ಮೇಲೆ ನಿಗಾ ಇರಿಸಲಾಗಿದೆ.ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರ್ಷಲ್ಸ್ ನಿಯೋಜನೆ ಮಾಡಲಾಗಿದೆ. ಸೋಂಕು ಪತ್ತೆಯಾದ ಮನೆ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ತಕ್ಷಣವೇ ಸ್ಯಾನಿಟೈಸ್ ಮಾಡಲು ಕ್ರಮ ವಹಿಸಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಕೊರೋನ ಕರಿನೆರಳು

ಹೋಟೆಲ್, ಚಿತ್ರಮಂದಿರ ಮತ್ತಿತರ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಸಂಪೂರ್ಣ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಇದರ ಜತೆಗೆ ರೈಲು, ಬಸ್ ನಿಲ್ದಾಣ, ಏರ್‍ಪೋರ್ಟ್‍ಗಳಲ್ಲಿ ಹೆಚ್ಚಿನ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡುವುದರೊಂದಿಗೆ ಮನೆ ಮನೆಗೆ ತೆರಳಿ ಲಸಿಕಾ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,

ಎಲ್ಲ ರೀತಿಯ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಇಲ್ಲದಿದ್ದರೆ ಬಿಎಂಟಿಸಿ ಮತ್ತು ಕೆಎಸ್‍ಆರ್‍ಟಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಅನುಮತಿ ನಿರಾಕರಿಸಲಾಗುವುದು. ನಮ್ಮ ಮೆಟ್ರೋ ರೈಲು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ನಗರಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ..ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರು ಲಸಿಕೆ ಹಾಕಿಸಿಕೊಂಡಿರಬೇಕು ಎಂಬ ನಿಯಮ ಇಂದಿನಿಂದ ಜಾರಿಯಾಗಲಿದೆ.

ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್ ರೋಗಲಕ್ಷಣ ಇರುವ ಪ್ರಯಾಣಿಕರನ್ನು ಪ್ರತ್ಯೇಕವಾಗಿರಿಸಬೇಕು. ನಿರ್ಗಮನ ವೇಳೆ ಪ್ರಯಾಣಿಕರು ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬ ಪ್ರಯಾಣಿಕರಿನಿಗೂ ಥರ್ಮಲ್ ಸ್ಟ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ.

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ, ರಾಹುಲ್ ಜೊತೆ ಹೆಜ್ಜೆ ಹಾಕಿದ ಸೋನಿಯಾ, ಪ್ರಿಯಾಂಕಾ

ಸೋಂಕು ಲಕ್ಷಣ ಕಂಡು ಬಂದ ಪ್ರಯಾಣಿಕರಿಗೆ ಸೂಕ್ತ ವೈದ್ಯಕೀಯ ಸೇವೆ ಒದಗಿಸಬೇಕು . ಅಂತಹ ವ್ಯಕ್ತಿಯ ಸ್ಯಾಂಪಲ್ ಸಂಗ್ರಹಿಸಿದ ಬಳಿಕವೇ ಅವರ ನಿರ್ಗಮನಕ್ಕೆ ಅವಕಾಶ ಮಾಡಿಕೊಡಬೇಕಿದೆ.ಸಂಗ್ರಹಿಸಿದ ಸ್ಯಾಂಪಲ್ ಪಾಸಿಟಿವ್ ಆಗಿದ್ದರೆ ಅದನ್ನು ಜಿನೋಮಿಕ್ ಟೆಸ್ಟ್‍ಗೆ ರವಾನಿಸಬೇಕು. ವಿಮಾನ ನಿಲ್ದಾಣಗಳಲ್ಲಿ 12 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಎಲ್ಲರಿಗೂ ರ್ಯಾಂಡಮ್ ಟೆಸ್ಟ್ ನಡೆಸಬೇಕಾಗುತ್ತದೆ.

#BBMP, #coronavirus, #Covid19

Articles You Might Like

Share This Article