ನ.15ರೊಳಗೆ ರಸ್ತೆ ಗುಂಡಿ ಮುಚ್ಚಲು ಖಡಕ್ ಆದೇಶ

Social Share

ಬೆಂಗಳೂರು,ನ.8- ರಸ್ತೆ ಗುಂಡಿಗಳಿಂದ ಹಾಳಾಗಿರುವ ಮಾನವನ್ನು ಮತ್ತೆ ಕಾಪಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ. ನ.15ರೊಳಗೆ ಗುಂಡಿ ಮುಚ್ಚದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುಡುಗಿದ್ದಾರೆ.

ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಮಾತ್ರವಲ್ಲ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು ರಸ್ತೆ ಗುಂಡಿ ಮುಚ್ಚಲು ಗಡುವು ನೀಡಿದ್ದರು.

ಗುಂಡಿಗಳಿಂದ ಹಾಳಾಗಿರುವ ಮಾನವನ್ನು ಮತ್ತೆ ಕಾಪಾಡಿಕೊಳ್ಳಲು ಮನಸ್ಸು ಮಾಡಿರುವ ಆಯುಕ್ತರು ನ.15ರೊಳಗೆ ನಗರದ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಪಾಲಕೆ ಎಂಜಿನಿಯರ್‍ಗಳಿಗೆ ಟಾರ್ಗೆಟ್ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಕೈನಲ್ಲಿ ಆಕ್ರೋಶ

ಈ ಹಿಂದೆ ನ. 10 ರೊಳಗೆ ಗುಂಡಿ ಮುಚ್ಚಲು ಗಡುವು ನೀಡಲಾಗಿತ್ತು. ಆದರೆ, ಕಳೆದ ವಾರ ಮತ್ತೆ ಮಳೆಯಾದ ಹಿನ್ನಲೆಯಲ್ಲಿ ಟಾರ್ಗೆಟ್ ರೀಚ್ ಆಗಲು ಸಾಧ್ಯವಾಗಿಲ್ಲ. ಹೀಗಾಗಿ ಮತ್ತೆ ನ.15ರವರೆಗೆ ಗಡುವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಮಳೆ ನೆಪ ಹೇಳಿ ಕಾಲಹರಣ ಮಾಡದೆ ಗುಂಡಿ ಮುಚ್ಚುವ ಕಾಮಗಾರಿ ತ್ವರಿತಗೊಳಿಸುವಂತೆ ಎಲ್ಲ ಮುಖ್ಯ ಅಭಿಯಂತರರಿಗೆ ನೋಟಿಸ್ ನೀಡಲಾಗಿದೆ. ಹೀಗಾಗಿ ನಗರದಲ್ಲಿ ಪ್ರತಿನಿತ್ಯ 500 ರಿಂದ 600 ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗುತ್ತಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಓವೈಸಿ ಮನವಿ

ನ. 15ರೊಳಗೆ ರಸ್ತೆ ಗುಂಡಿ ಮುಚ್ಚಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಈ ಬಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Articles You Might Like

Share This Article