576 ಕಿ.ಮೀ. ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಟೆಂಡರ್‌ಗೆ ಮುಂದಾದ ಬಿಬಿಎಂಪಿ

Social Share

ಬೆಂಗಳೂರು, ಜು.28- ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 576 ಕಿ.ಮೀ ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಾಕಿಯಿದ್ದು, ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ನಡೆಸಲು ಬಿಬಿಎಂಪಿ ಮುಂದಾಗಿದೆ. ರಸ್ತೆ ಗುಂಡಿ ವಿಚಾರ ಸಂಬಂಧ ಹೈಕೋರ್ಟಿಗೆ ಬಿಬಿಎಂಪಿ ಈ ಬಗ್ಗೆ ಮಾಹಿತಿ ನೀಡಿದ್ದು, ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್‍ಟಿಎಸ್) ಸಂಸ್ಥೆ ಜಂಟಿಯಾಗಿ ನಡೆಸಿದ ಸರ್ವೆ ಪ್ರಕಾರ 847.56 ಕಿ.ಮೀ ರಸ್ತೆಗುಂಡಿ ಸರಿಪಡಿಸಬೇಕಿದೆ.

ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷ (ಎಆರ್‍ಟಿಎಸ್) ಸಂಸ್ಥೆಗೆ ಪೈಥಾನ್ ಯಂತ್ರ ಬಳಸಿ ನಗರದ 397 ಕಿಲೋ ಮೀಟರ್ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲು ಕಾರ್ಯಾದೇಶ ನೀಡಲಾಗಿದೆ. ಇನ್ನುಳಿದ 576 ಕಿ.ಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದೆ.

ಇದೇ ರಸ್ತೆ ಗುಂಡಿ ಮುಚ್ಚುವ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಸಲಹೆ ನೀಡಿದ ಸಿಜೆ, ರಸ್ತೆ ಸರಿಪಡಿಸುವವರೆಗೆ ಪಿಐಎಲ್ ಮುಕ್ತಾಯಗೊಳಿಸುವುದಿಲ್ಲ ಎಂದು ವಿಚಾರಣೆ ಜು.27ಕ್ಕೆ ನಿಗದಿಪಡಿಸಿತ್ತು. ಅಷ್ಟರಲ್ಲಿ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಆಗಿರುವ ಪ್ರಗತಿಯ ಕುರಿತು ವಿವರ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.

ಮತ್ತೊಂದೆಡೆ, ಬೆಂಗಳೂರು ಮಹಾನಗರದಲ್ಲಿ ಯಾವ್ಯಾವ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸಲು ಹೈಕೋರ್ಟ್ ಆ.3 ರವರೆಗೆ ಬಿಬಿಎಂಪಿಗೆ ಗಡುವು ನೀಡಿದೆ. ಕೋರಮಂಗಲದ ವಿಜಯನ್ ಮೆನನ್ 2015ರಲ್ಲಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲರು ಹಾಜರಾಗಿ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜು.30ರಂದು ಹೈಕೋರ್ಟ್‍ಗೆ ಪಾಲಿಕೆಗೆ ನಿರ್ದೇಶಿಸಿದೆ. ಅದರಂತೆ ಆ ಆದೇಶದ ಅನುಪಾಲನಾ ವರದಿ ಸಿದ್ಧವಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸ್ವಲ್ಪ ಕಾಲಾವಕಾಶಬೇಕಿದೆ ಎಂದು ತಿಳಿಸಿದರು.

Articles You Might Like

Share This Article