ಸಮಾಜ ಕಲ್ಯಾಣ ಇಲಾಖೆ ಹೆಸರಲ್ಲಿ ವಂಚನೆ ವಂಚಿಸುತ್ತಿದ್ದ ಮೂವರ ಬಂಧನ

Social Share

ಬೆಂಗಳೂರು, ಜ.25- ಬಿಬಿಎಂಪಿ ಸಮಾಜ ಕಲ್ಯಾಣ ಇಲಾಖೆ ಹೆಸರೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲವೊಂದನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಪತ್ತೆ ಹಚ್ಚಿ ಮೂವರನ್ನು ಬಂಧಿಸಿದ್ದಾರೆ.

ವಿದ್ಯಾರಣ್ಯಪುರದ ಹರ್ಷ(20), ವಿಜಯನಗರದ ರೂಪೇಶ್(18) ಮತ್ತು ಬಾಪೂಜಿ ನಗರದ ಮೋಹನ್ ಅಲಿಯಾಸ್ ಬೋರ(21) ಬಂಧಿತ ವಂಚಕರು. ಬಿಬಿಎಂಪಿಯ ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್‍ಗಳನ್ನು ಕೊಡುತ್ತೇವೆಂದು ಸಾರ್ವಜನಿಕರಿಗೆ ಕರೆ ಮಾಡಿ ನಂಬಿಸಿ, ಹಣ ಹಾಕಿಸಿಕೊಂಡು ಅಮಾಯಕ ಜನರನ್ನು ಈ ಮೂವರು ವಂಚಿಸುತ್ತಿದ್ದರು.

ವಿದ್ಯಾರಣ್ಯಪುರದ ವ್ಯಕ್ತಿಯೊಬ್ಬರಿಗೆ ಇದೇ ರೀತಿ ಕರೆ ಮಾಡಿ ನಂಬಿಸಿ ಅರ್ಜಿ ಶುಲ್ಕ, ರಿಜಿಸ್ಟ್ರೇಷನ್ ಫೀಸ್ ಎಂದು ಹಲವು ಕಾರಣಗಳನ್ನು ಹೇಳಿ 40,500 ರೂ. ಹಣ ಹಾಕಿಸಿಕೊಂಡು ವಂಚಿಸಿದ್ದ ಬಗ್ಗೆ ಈಶಾನ್ಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬಿಜೆಪಿಯಲ್ಲಿ ರಾಜಾಹುಲಿ ಬಿಎಸ್‍ವೈಗೆ ಇದೀಗ ಭಾರೀ ಬೇಡಿಕೆ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖಾಕಾಧಿರಿಗಳು ತನಿಖೆ ನಡೆಸಿದಾಗ ಸಾರ್ವಜನಿಕರಿಗೆ ಕರೆ ಮಾಡಿ ಉಚಿತವಾಗಿ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ಗಳನ್ನು ನೀಡುತ್ತಿರುವುದಾಗಿ ಹೇಳಿ ನಂಬಿಸಿ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ ಮೂವರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಸಿಮ್ ಕಾರ್ಡ್‍ಗಳು, ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಎ.ಕೆ.ಆಂಟನಿ ಪುತ್ರ ಗುಡ್‍ಬೈ

ಇವರುಗಳ ವಿರುದ್ಧ ಸಿಇಎನ್ ಪೊಲೀಸ್ ಠಾಣೆ ದಕ್ಷಿಣ ವಿಭಾಗ ಹಾಗೂ ಉತ್ತರ ವಿಭಾಗಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಆರೋಪಿತರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಮುಂದಿನ ತನಿಖೆ ಪ್ರಗತಿಯಲ್ಲಿದೆ.

BBMP, students, free, laptops, Fraud, Three arrested,

Articles You Might Like

Share This Article