Saturday, October 12, 2024
Homeಬೆಂಗಳೂರುಬಿಬಿಎಂಪಿ ಶಾಲಾ-ಕಾಲೇಜುಗಳ ಶಿಕ್ಷಕರು-ಉಪನ್ಯಾಸಕರ ಸೇವಾ ಭದ್ರತೆಗೆ ಒತ್ತಾಯಿಸಿ ಪ್ರತಿಭಟನೆ

ಬಿಬಿಎಂಪಿ ಶಾಲಾ-ಕಾಲೇಜುಗಳ ಶಿಕ್ಷಕರು-ಉಪನ್ಯಾಸಕರ ಸೇವಾ ಭದ್ರತೆಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಜ.10- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲಾ-ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರ ಸೇವಾ ಭದ್ರತೆಗೆ ಒತ್ತಾಯಿಸಿ ಪಾಲಿಕೆಯ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ದಶಕಗಳಿಂದ ಸೇವಾ ಕಾಯಂ ಇಲ್ಲದೆ ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರಣ ಕಡಿಮೆ ಸಂಬಳ ನೀಡಲಾಗುತ್ತಿದೆ. ಬಡ್ತಿ, ಗೌರವಧನ ಹೆಚ್ಚಳ ಮಾಡದಿರುವುದು ಹಲವರ ವಯೋಮಿತಿ ಏರುತ್ತಿದೆ. ಅತಿಥಿ ಉಪನ್ಯಾಸಕರಿಗೆ ನೀಡುವ ಸೌಲಭ್ಯಗಳನ್ನು ಗುತ್ತಿಗೆ ಶಿಕ್ಷಕರಿಗೆ ವಿಸ್ತರಿಸದಿರುವುದು ಭಾರೀ ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..?

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್.ಎನ್, 2007ರಿಂದ ಬಿಬಿಎಂಪಿ ವತಿಯಿಂದ ನೇರವಾಗಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.

ಮರುವರ್ಷದಿಂದ ಒಳಗುತ್ತಿಗೆ ಅಡಿಯಲ್ಲಿ ಏಜೆನ್ಸಿ ಮೂಲಕ ವೇತನ ಪಾವತಿ ಮಾಡಲಾಗುತ್ತಿದೆ. ಆದರೆ, ಪಾಲಿಕೆ ಏಜೆನ್ಸಿಗೆ ಪಾವತಿಸುವ ಮೊತ್ತಕ್ಕಿಂತ ಕಡಿಮೆ ಹಣವನ್ನು ಶಿಕ್ಷಕ ಸಮುದಾಯಕ್ಕೆ ಸಂದಾಯ ಮಾಡಿ ಅನ್ಯಾಯ ಎಸಗಲಾಗಿದೆ. ಈ ತಾರತಮ್ಯ ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

RELATED ARTICLES

Latest News