ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

Social Share

ಬೆಂಗಳೂರು,ಜ.21- ಮೂಲಭೂತ ಸೌಲಭ್ಯ ಗಳನ್ನು ಕಲ್ಪಿಸುವ ಭರದಲ್ಲಿ ನಗರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ವತಿಯಿಂದ ಕೋಟಿ ವೃಕ್ಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು.

ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಯತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ ವೃಕ್ಷ ಸೈನ್ಯದ ವತಿಯಿಂದಲೂ ನಗರದ ಕೆರೆಗಳು, ಉದ್ಯಾನವನಗಳು, ಮೀಸಲು ಅರಣ್ಯ ಹಾಗೂ ಇನ್ನಿತರೆ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು 3 ವರ್ಷಗಳ ಕಾಲ ಪೋಷಣೆ ಮಾಡಲಾಗುವುದು ಎಂದರು.

ಕಳೆದ 3 ವರ್ಷಗಳಿಂದ ಕೋವಿಡ್ ಇದ್ದ ಪರಿಣಾಮ ನಗರದಲ್ಲಿ ಹೆಚ್ಚಾಗಿ ಸಸಿಗಳನ್ನು ನೆಡಲು ಸಾಧ್ಯವಾಗಿಲ್ಲ. ಪ್ರಸಕ್ತ ಸಾಲಿನಿಂದ ಸಸಿಗಳನ್ನು ನೆಡುವ ಪ್ರಮಾಣವನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಕೊಂಡು ಹೋಗುತ್ತಾ ನಗರಲ್ಲಿ ಹೆಚ್ಚು ಸಸಿಗಳನ್ನು ಬೆಳೆಸಲು ಕ್ರಮವಹಸಿಬೇಕು. ಅದಕ್ಕಾಗಿ ನಗರದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಾಗರಿಕರು ಹಾಗೂ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಅವುಗಳು ಬೆಳೆಯುವವರೆಗೆ ಪೋಷಣೆ ಮಾಡಬೇಕೆಂದು ಹೇಳಿದರು.

ಫೆ.6ಕ್ಕೆ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ

ನಗರದಲ್ಲಿ ಸದ್ಯ ಇರುವ ಮರಗಳ ಮೇಲೆ ಬಿತ್ತಿಪತ್ರಗಳನ್ನು ಅಂಟಿಸುವುದು, ಮೊಳೆ ಹೊಡೆಯುವುದು, ಮರಗಳನ್ನು ನಾಶ ಪಡಿಸಲು ಆಸಿಡ್ ಹಾಕುವ ಕೆಲಸ ಮಾಡುತ್ತಾರೆ. ಅಂತಹ ಘಟನೆಗಳು ಕಂಡುಬಂದಲ್ಲಿ ಅದನ್ನು ಕೂಡಲೆ ತಡೆಯುವ ಕೆಲಸ ಮಾಡಬೇಕು. ನಗರದಲ್ಲಿ ಹಸಿರೀಕರಣವನ್ನು ವೃದ್ಧಿಸುವ ಕೆಲಸ ಮಾಡಬೇಕು. ಇದರಿಂದ ವಾಯು ಮಾಲೀನ್ಯ ಕಡಿಮೆಯಾಗಿ ನಾಗರಿಕರಿಗೆ ಉತ್ತಮ ಆಮ್ಲಜನಕ ಸಿಗಲಿದೆ ಎಂದು ತಿಳಿಸಿದರು.

ಪ್ರಶಂಸನಾ ಪ್ರಮಾಣ ಪತ್ರ ವಿತರಣೆ: ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವಂತಹ ತಂಡಗಳಿಗೆ ಬಿಬಿಎಂಪಿ ವತಿಯಿಂದ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಮೆಟ್ರೋ ಪಿಲ್ಲರ್ ಕುಸಿತಕ್ಕೆ ಗುತ್ತಿಗೆದಾರ ಎಂಜಿನಿಯರ್‌ಗಳೇ ಹೊಣೆ

ಈ ವೇಳೆ ವಿಶೇಷ ಆಯುಕ್ತ ದೀಪಕ್ ಉಪ ಅರಣ್ಯ ಸಂರಕ್ಷಣಾಕಾರಿ ಸರಿನಾ ಸಿಕ್ಕಲಿಗರ್, ಕೋಟಿ ವೃಕ್ಷ ಸೈನ್ಯದ ಸಂಸ್ಥಾಪಕರಾದ ಸುರಭಿ, ಪಾಲಿಕೆ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BBMP, tree campaign, launched, Chief Commissioner, Tushar Girinath,

Articles You Might Like

Share This Article