Wednesday, October 16, 2024
Homeಬೆಂಗಳೂರು18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಮನವಿ

18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಮನವಿ

ಬೆಂಗಳೂರು,ಡಿ.2- ಮತದಾರರ ವಿಶೇಷ ನೋಂದಣಿ ಅಭಿಯಾನದ ಸ್ಥಳಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಇಂದು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಯಲಹಂಕ ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಭಾಗವಾಗಿ ಕಾಲಾಜು ವಿಧ್ಯಾರ್ಥಿಗಳ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಮಾಡಬೇಕೆಂದು ತಿಳಿಸಿದರು.

ಮತದಾನದ ಪ್ರಕ್ರಿಯೆಯಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಲಿದ್ದು, 18 ವರ್ಷ ತುಂಬಿದ ಎಲ್ಲಾ ಯುವ ಮತದಾರರು ತಪ್ಪದೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮನವಿ ಮಾಡಿದರು.

ಜಿಲ್ಲಾ ಚುನಾವಣಾ ಕಛೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. 18 ವರ್ಷ ತುಂಬುವ ಎಲ್ಲರೂ ಆನ್‍ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕೆಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಮುಂದಿನ ವರ್ಷ 18 ವರ್ಷ ತುಂಬುವವರು ಕೂಡಾ ಈಗಲೇ ನಮೂನೆ 6ರ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ನಿಮಗೆ 18 ವರ್ಷ ತುಂಬಿದ ಕೂಡಲೆ ಸ್ವಯಂಚಾಲಿತವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುತ್ತದೆ ಎಂದು ಹೇಳಿದರು.

ನಗರದಲ್ಲಿ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆಗೆ, ವಿಶೇಷ ಚೇತನರು, ಕೊಳಗೇರಿ ಪ್ರದೇಶದಲ್ಲಿ ವಾಸಿಸುವರು ಸೇರಿದಂತೆ ಇನ್ನಿತರರನ್ನು ಸೇರ್ಪಡೆ ಮಾಡಲಾಗುತ್ತಿದೆ. ದೇಶದಲ್ಲಿ ಶೇ. 55 ರಷ್ಟು ಯುವ ಸಮೂಹವಿದ್ದು, ಎಲ್ಲರೂ ಮಹತ್ವದ ಮತದಾರರಾಗಿ ಪ್ರಮೂಖ ಪಾತ್ರ ವಹಿಸಲಿದ್ದಾರೆ ಎಂದರು.

ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ

ಪ್ರತಿ ಚುನವಾಣೆಯಲ್ಲಿಯೂ ಎಲ್ಲರೂ ತಪ್ಪದೆ ಮತದಾನ ಮಾಡಲು ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಮತದಾನದ ದಿನ ರಜೆ ನೀಡುವ ಉದ್ದೇಶ ಎಲ್ಲರೂ ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬೇಕೆಂಬಯದಾಗಿದೆ. ಆದರೆ ಸಾಕಷ್ಟು ಮಂದಿ ಮತದಾನ ಮಾಡಲು ಮುಂದೆ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಯುವ ಮತದಾರರು ಮತದಾನದ ಪ್ರಾಮುಖ್ಯತೆಯನ್ನು ತಿಳಿಸಿ ಎಲ್ಲರೂ ಮತದಾನ ಮಾಡುವಂತೆ ಮಾಡಬೇಕೆಂದು ತಿಳಿಸಿದರು.

ನಗರದ ಆಯಾ ವಾರ್ಡ್ ಗಳಲ್ಲಿ ಬರುವ ಎಲ್ಲಾ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು / ವಾರ್ಡ್ ಕಛೇರಿಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬಹುದು. ಅಲ್ಲದೆ ಬೂತ್ ಮಟ್ಟದ ಅಧಿಕಾರಿಗಳು ಜನದಟ್ಟಣೆ ಪ್ರದೇಶ ಹಾಗೂ ಮನೆ-ಮನೆಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ ಎಂದರು.

ಸಹಕಾರ ನಗರದಲ್ಲಿರುವ ಕಾವೇರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಎಲ್ಲರೂ ತಪ್ಪದೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಮನವಿ ಮಾಡಿದರು. ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ರ್ಆ.ರಾಮಚಂದ್ರನ್, ಜಿಲ್ಲಾ ಪಂಚಾಯ್ತಿ ಮುಖ್ಯ ನಿರ್ವಾಹಕ ಅಧಿಕಾರಿಯಾಧ ಕಾಂತರಾಜು, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಹೀಮ್ ಮೊಮಿನ್ , ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಕಾಲೇಜ್ ಪ್ರಾಂಶುಪಾಲರಾದ ಡಾ. ಎಸ್.ಎನ್ ವೆಂಕಟೇಶ್, ಮತದಾರ ನೋಂದಣಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News