ರಾಷ್ಟ್ರೀಯ ಶಿಕ್ಷಣ ನೀತಿ ಮುಂದಿನ ವರ್ಷ ಅನುಷ್ಠಾನ

Social Share

ಬೆಂಗಳೂರು,ನ.1- ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ಪ್ರಮುಖ ಪಾತ್ರ ವಹಿಸುವ ಕಾರಣ ಇದರಲ್ಲಿರುವ ಎಲ್ಲ ಅಂಶಗಳನ್ನು ಜಾರಿ ಮಾಡಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನಕ್ಕೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿ ರುವ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ – 2022ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವುದರಿಂದ ಶಿಕ್ಷಣದಲ್ಲಿ ಅನೇಕ ಸುಧಾರಣೆಗಳು ಆಗಲಿವೆ. ಇದು ನಮ್ಮ ರಾಜ್ಯದಲ್ಲೂ ಅನುಷ್ಠಾನ ಮಾಡಲು ಈಗಾಗಲೇ ತೀರ್ಮಾನಿಸಿದ್ದೇವೆ. ಎಲ್ಲ ಅಂಶಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕನ್ನಡ ಅವತರಣಿಕೆಯ ಪುಸ್ತಕದ ಪ್ರತಿಗಳನ್ನು ಎಲ್ಲ ಶಿಕ್ಷಕರಿಗೆ ಒದಗಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಸಾರ 3ರಿಂದ 8ರ ವಯೋಮಾನದ ಮಕ್ಕಳಿಗೆ ಶಿಕ್ಷಣ ನೀಡುವ ಬುನಾದಿ ಹಂತದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಬಿಡುಗಡೆಯಾಗಿದ್ದು, ಇದನ್ನು ಕನ್ನಡಕ್ಕೆ ಭಾಷಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಪ್ಪುಗೆ ಕರ್ನಾಟಕ ರತ್ನ (LIVE UPDATES)

ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆಟಿಕೆಗಳು, ಸ್ಥಳೀಯ ಕತೆ, ಪುರಾಣ, ವೈವಿಧ್ಯತೆಗಳನ್ನೊಳಗೊಂಡ ರಾಜ್ಯ ಪಠ್ಯಕ್ರಮ ಚೌಕಟ್ಟನ್ನು ರಚಿಸಿ, 2023-24ನೇ ಸಾಲಿನಿಂದ ಬುನಾದಿ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಫಾರಸ್ಸಿನಂತೆ ಶಾಲಾ ಶಿಕ್ಷಣದ ಎಲ್ಲಾ ಹಂತಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ರಾಷ್ಟ್ರೀಯ ಮತ್ತು ರಾಜ್ಯ ಪಠ್ಯಕ್ರಮ ಚೌಕಟ್ಟುಗಳನುಸಾರ ಅಂಗನವಾಡಿ ಶಿಕ್ಷಕರ ಸಾಮಥ್ರ್ಯಾಭಿವೃದ್ಧಿಗೆ ಅಗತ್ಯವಾದ ಸಾಮಥ್ರ್ಯ ವರ್ಧನೆ ಕಾರ್ಯಕ್ರಮವನ್ನು ಹಂತವಾರು ಅನುಷ್ಠಾನಗೊಳಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಒಂದು ಕೋಟಿ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 8100 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ನಾಡುನುಡಿ ಬೆಳೆಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದ ಸರ್ಕಾರಿ ಶಾಲೆ, ಪದವಿ-ಪೂರ್ವ ಕಾಲೇಜುಗಳಲ್ಲಿನ ಕೊಠಡಿಗಳ ಕೊರತೆ ನೀಗಿಸುವ ಮತ್ತು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರವು ವಿವೇಕ ಕಾರ್ಯಕ್ರಮದಡಿ ಇತ್ತೀಚಿನ ವರ್ಷಗಳಲ್ಲಿ ದಾಖಲೆ ಎನ್ನಬಹುದಾದ 8100 ಶಾಲೆ ಕಾಲೇಜುಗಳ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಕೊಠಡಿಗಳ ನಿರ್ಮಾಣ ಹಾಗೂ ಶಿಕ್ಷಕರ ನೇಮಕದ ಮೂಲಕ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕನ್ನಡ ಮಾಧ್ಯಮದ ಪ್ರೌಢಶಾಲೆಗಳಾಗಿ ಉನ್ನತೀಕರಿಸಲಾಗಿದೆ. ಇದರಲ್ಲಿ 80 ಕ್ಕೂ ಹೆಚ್ಚು ಶಾಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಇರುತ್ತವೆ ಎಂದು ಮಾಹಿತಿ ನೀಡಿದರು.

ನಮ್ಮ ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಯಲ್ಲಿ ಶಾಲೆಗಳು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಕೋವಿಡ್ ಸೋಂಕಿನ ಕಾರಣದಿಂದ ಶಾಲೆ-ಕಾಲೇಜುಗಳಲ್ಲಿ ನೇರ ತರಗತಿಗಳು ನಡೆಯದ ಕಾರಣ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

ವಿದ್ಯಾರ್ಥಿಗಳಲ್ಲಿ ಕೋವಿಡ್ನಿಂದ ಉಂಟಾಗಿರಬಹುದಾದ ಕಲಿಕಾ ಕೊರತೆಗಳನ್ನು ಸರಿದೂಗಿಸಲು ಇಡೀ ದೇಶದಲ್ಲಿಯೇ ಮಾದರಿ ಎನ್ನಬಹುದಾದ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲಾ ಶಿಕ್ಷಕರು ಮತ್ತು ಇಲಾಖೆಯ ಅಕಾರಿ, ಸಿಬ್ಬಂದಿಗಳು ಅತ್ಯಂತ ಶ್ಲಾಘನೀಯ ಕಾರ್ಯ ಮಾಡುತ್ತಿದ್ದಾರೆ ಎಂದರು.

Articles You Might Like

Share This Article