ಬೆಳ್ಳಂ ಬೆಳಗ್ಗೆ ಜೆಸಿಬಿ ಘರ್ಜನೆ : 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

Social Share

ಬೆಂಗಳೂರು,ನ.22- ಸರ್ಕಾರಿ ಭೂಮಿ ಒತ್ತುವರಿ ತೆರೆವು ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇಂದು ಬೆಳಿಗ್ಗೆ 30 ಕೋಟಿ ರೂ. ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದಿದೆ.

ಬಿಡಿಎಗೆ ಸೇರಿದ್ದ ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ ಈ ಜಾಗವನ್ನು ಕೆಲವು ಅತಿಕ್ರಮಣದಾರರು ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್‍ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಬಿಡಿಎ ಆಯುಕ್ತರ ಆದೇಶದನ್ವಯ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠ್ರಾಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್ ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ಶೆಡ್‍ಗಳನ್ನು ತೆರವುಗೊಳಿಸಲಾಯಿತು.

ಚೀನಾದಲ್ಲಿ ಮತ್ತೆ ಕೋವಿಡ್ ಹೆಚ್ಚಳ, ಶಾಲಾ-ಕಾಲೇಜು ಬಂದ್..!

ನಕಲಿ ಎಒಸಿ ಇದ್ದರೆ ಕ್ರಿಮಿನಲ್ ಕೇಸ್- ವಿಶ್ವನಾಥ್ ಎಚ್ಚರಿಕೆ: ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂ ಕಬಳಿಕೆದಾರರಿಗೆ ನಕಲಿ ಎನ್‍ಒಸಿಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು.

ಇದೀಗ ಇಂತಹ ನಕಲಿ ಎನ್‍ಒಸಿ ಪ್ರಕರಣಗಳನ್ನು ಬಯಲಿಗೆ ತರಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಅದೇ ರೀತಿ, ನಕಲಿ
ಎನ್‍ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ಕಬಳಿಕೆ ಮಾಡಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೀಗೆ ನಕಲಿ ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಸುತ್ತಿರುವವರು ಕೂಡಲೇ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದರು.

ವೋಟರ್ ಐಡಿ ಹಗರಣಕ್ಕೆ ಮಹತ್ವದ ಟ್ವಿಸ್ಟ್..?!

ಭೂಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾ ಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

BDA, assets, worth, 30 crores, seized,

Articles You Might Like

Share This Article