Thursday, January 23, 2025
Homeಬೆಂಗಳೂರುಬಿಡಿಎ ಕಾರ್ಯಾಚರಣೆ : 120 ಕೋಟಿ ಮೌಲ್ಯದ ಆಸ್ತಿ ವಶ

ಬಿಡಿಎ ಕಾರ್ಯಾಚರಣೆ : 120 ಕೋಟಿ ಮೌಲ್ಯದ ಆಸ್ತಿ ವಶ

BDA operation: Property worth Rs 120 crore seized

ಬೆಂಗಳೂರು,ಜ.23- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ವು ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಾಗರಬಾವಿ ಬಡಾವಣೆಯ ಮಾಳಗಾಲದಲ್ಲಿ 120 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಮಾಳಗಾಲ ಗ್ರಾಮದ (ನಾಗರಬಾವಿ ಬಡಾವಣೆ) ಸರ್ವೆ ನಂ. 14/2ರ 2 ಎಕರೆ 16 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 20 ಎ.ಸಿ. ಶೀಟ್ ಶೆಡ್, ಆರ್.ಟಿ.ಸಿ ಕಟ್ಟಡಗಳನ್ನು ತೆರವುಗೊಳಿಸಿ, ಸುಮಾರು 120 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಉಪ ಆರಕ್ಷಕ ಅಧೀಕ್ಷಕರಾದ ಕೃಷ್ಣಕುಮಾರ್, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ರವಿಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಸವರೆಡ್ಡಿ ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ನಾಗರಬಾವಿ 2ನೆ ಹಂತದ ಪಾಪರೆಡ್ಡಿಪಾಳ್ಯದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಸುಮಾರು 48 ಮನೆಗಳನ್ನು ತೆರವುಗೊಳಿಸಲಾಯಿತು. ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಗದ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಇತ್ತು. ಬಿಡಿಎ ಪರವಾಗಿ ತೀರ್ಪು ಬಂದ ಹಿನ್ನಲೆಯಲ್ಲಿ ಇಂದು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

RELATED ARTICLES

Latest News