Tuesday, May 21, 2024
Homeರಾಷ್ಟ್ರೀಯಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ನಕಾರ

ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ನಕಾರ

ನವದೆಹಲಿ,ಮೇ.3- ಅಮೇಥಿ ಇಲ್ಲವೇ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಒಂದರಲ್ಲಿ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಿಕೊಂಡ ಮನವಿಯನ್ನು ಪ್ರಿಯಾಂಕಾ ಗಾಂಧಿ ನಿರಾಕರಿಸಿದ್ದಾರೆ ಇದರೊಂದಿಗೆ ಅವರು ಈ ಬಾರಿಯೂ ಚುನಾವಣಾ ರಾಜಕೀಯಕ್ಕೆ ಕಾಲಿಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಬಿಜೆಪಿಯ ವಂಶಾಡಳಿತ ರಾಜಕಾರಣದ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಪ್ರಿಯಾಂಕಾ ಅವರು ನಾನು ರಾಜಕಾರಣಕ್ಕೆ ಎಂಟ್ರಿ ಪಡೆದರೆ ನಮ್ಮದು ವಂಶಾಡಳಿತಕ್ಕೆ ಕಾರಣವಾಗುತ್ತದೆ ಎಂಬ ಕಾರಣದಿಂದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಸೋನಿಯಾಗಾಂಧಿ ಅವರು ರಾಜ್ಯಸಭೆ ಸದಸ್ಯರಾಗಿದ್ದರೆ ಇದರ ಜೊತೆಗೆ ರಾಹುಲ್‌ಗಾಂಧಿ ಕೇರಳದ ವಯನಾಡು ಹಾಗೂ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿರುವುದರಿಂದ ನಾನು ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಆಕೆಯ ಈ ನಿರ್ಧಾರವು ಮತದಾರರಲ್ಲಿ ನಕಾರಾತ್ಮಕ ಗ್ರಹಿಕೆಯನ್ನು ಉಂಟುಮಾಡಬಹುದು ಎಂದು ಕೆಲವು ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಮಂಗಲಸೂತ್ರ ಆರೋಪದ ನಂತರ ಅವರು ಕಾಂಗ್ರೆಸ್‌‍ ಪರ ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾ ಇಂತಹ ಸಂದರ್ಭದಲ್ಲಿ ಪ್ರಿಯಾಂಕಾ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ಅಪಾಯ ಸಾಧ್ಯತೆ ಇದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ರಾಯ್‌ ಬರೇಲಿಯಲ್ಲಿ ರಾಹುಲ್‌ಗಾಂಧಿ ಅವರು ಬಿಜೆಪಿಯ ದಿನೇಶ್‌ ಪ್ರತಾಪ್‌ ಸಿಂಗ್‌ ಅವರನ್ನು ಎದುರಿಸಲಿದ್ದಾರೆ ಮತ್ತು ಶರ್ಮಾ ಅವರು ಅಮೇಥಿಯಲ್ಲಿ ಕೇಂದ್ರ ಸಚಿವೆ ಸತಿ ಇರಾನಿ ಅವರನ್ನು ಎದುರಿಸಲಿದ್ದಾರೆ. 2019 ರ ಚುನಾವಣೆಯಲ್ಲಿ ಗಾಂಧಿ ವಿರುದ್ಧ ಇರಾನಿ ಆಘಾತಕಾರಿ ಗೆಲುವು ಸಾಧಿಸಿದ್ದರು ಮತ್ತು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ.

ರಾಯ್‌ ಬರೇಲಿಯಲ್ಲಿ ರಾಹುಲ್‌ಗಾಂಧಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್‌‍ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೇಥಿಯಲ್ಲೂ ಶರ್ಮಾ ಒಬ್ಬ ತಳಮಟ್ಟದ ನಾಯಕರಾಗಿದ್ದು ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಅವರು ಹೇಳುತ್ತಾರೆ.ಇದರ ಜೊತೆಗೆ ಅಮೇಥಿಯಿಂದ ಸ್ಪರ್ಧಿಸುತ್ತಿರುವ ಶರ್ಮಾ ಅವರನ್ನು ಪ್ರಿಯಾಂಕಾ ಗಾಂಧಿ ಅವರು ಸಾಮಾಜಿಕ ಜಾಲತಾಣದ ಮೂಲಕ ಶುಭಾಷಯ ಕೋರಿದ್ದಾರೆ.

RELATED ARTICLES

Latest News