Monday, February 26, 2024
Homeರಾಜ್ಯಮುಸಲ್ಮಾನ ಗೂಂಡಾಗಳಿಂದ ನೈತಿಕ ಪೋಲೀಸ್‍ಗಿರಿ : ಈಶ್ವರಪ್ಪ ಆಕ್ರೋಶ

ಮುಸಲ್ಮಾನ ಗೂಂಡಾಗಳಿಂದ ನೈತಿಕ ಪೋಲೀಸ್‍ಗಿರಿ : ಈಶ್ವರಪ್ಪ ಆಕ್ರೋಶ

ಬೆಳಗಾವಿ,ಜ.7- ಬೆಳಗಾವಿಯಲ್ಲಿ ನಡೆದಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಗೂಂಡಾಗಳನ್ನುಮಟ್ಟ ಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಲಂಬಾಣಿ ಎಂಬ ಯುವಕನ ಮೇಲೆ ಹಲ್ಲೆಯಾಗಿದೆ. ಅವರ ಸಂಬಂಧಿಕರು ಮುಸಲ್ಮಾನರಾಗಿ ಮತಾಂತರ ಆಗಿದ್ದಾರೆ. ಆತನ ಜೊತೆ ಕುಳಿತಿದ್ದ ಹೆಣ್ಣುಮಗಳು ಸಚಿನ್‍ಗೆ ತಂಗಿಯಾಗಬೇಕು. ಇಬ್ಬರೂ ಯುವನಿಗೆ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ಕಚೇರಿಯಲ್ಲಿ ಒಂದು ಗಂಟೆಯ ಬಳಿಕ ಬರುವಂತೆ ಹೇಳಿದ್ದರಿಂದಾಗಿ ಹೊರಗಡೆ ಕುಳಿತಿದ್ದರು. ಆ ಸಂದರ್ಭದಲ್ಲಿ ಕೆಲವು ಮುಸಲ್ಮಾನ ಗೂಂಡಾಗಳು ಬಂದು, ನೈತಿಕ ಪೊಲೀಸ್‍ಗಿರಿ ನಡೆಸಿದ್ದಾರೆ ಎಂದು ಹೇಳಿದರು.

ಮುಸ್ಲಿಂ ಹುಡುಗಿಯ ಜೊತೆ ಕುಳಿತಿದ್ದೀಯ ಎಂದು ಹೇಳಿ ಸಚಿನ್ ಲಂಬಾಣಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆತ ಕಷ್ಟಪಟ್ಟು ತಪ್ಪಿಸಿಕೊಂಡು ಬಂದಿದ್ದಾನೆ. ಹಲ್ಲೆಯ ವಿಡಿಯೋಗಳನ್ನು ನಾನು ನೋಡಿದ್ದೇನೆ. ಅವುಗಳನ್ನು ಮಾದ್ಯಮದಲ್ಲಿ ಪ್ರಸಾರ ಮಾಡುವ ಮೂಲಕ ಮುಸ್ಲಿಂ ಗೂಂಡಾಗಳ ದೌರ್ಜನ್ಯದ ಕುರಿತು ಜನಜಾಗೃತಿ ಮೂಡಿಸಬೇಕು. ಯುವತಿಯ ಮೇಲೂ ದೌರ್ಜನ್ಯವಾಗಿದೆ ಎಂಬ ಆರೋಪಗಳಿವೆ. ಆದರೆ ನನಗೆ ಖಚಿತವಾದ ಮಾಹಿತಿಗಳಿಲ್ಲ. ಆಕೆ ಮುಸಲ್ಮಾನರಾಗಿದ್ದರೂ ಕೂಡ ನ್ಯಾಯ ದೊರಕಿಸಬೇಕು ಎಂದು ಹೇಳಿದರು.

ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್

ಬೆಳಗಾವಿಯಲ್ಲಿ ಪೊಲೀಸ್ ವ್ಯವಸ್ಥೆ ವೈಫಲ್ಯ ಕಂಡಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ್ದೂ ಸೇರಿದಂತೆ ಇತ್ತೀಚೆಗೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು.

ಕಾಂಗ್ರೆಸಿಗರು ಹಿಂದೂ, ಮುಸ್ಲಿಂ ನಡುವೆ ಗಲಾಟೆ ಸೃಷ್ಟಿಸಿ, ಅದರಿಂದಾಗಿಯೇ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸಂಚು ರೂಪಿಸಿದ್ದಾರೆ. ಹೀಗಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯ ಕರಸೇವಕ ಪ್ರಕರಣದಲ್ಲಿ 14 ಕೇಸುಗಳಿವೆ ಎಂದು ಸುಳ್ಳು ಹೇಳಿದರು. ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಯಿತು. ಇದಕ್ಕೆ ಜನರೂ ಬೆಂಬಲ ನೀಡಿದರು. ಕೋರ್ಟಿಗೂ ಮನವರಿಕೆಯಾಗಿ ಬಂಧಿತನಿಗೆ ಜಾಮೀನು ಸಿಕ್ಕಿದೆ ಎಂದು ಹೇಳಿದರು.

ಮುಖ್ಯಮಂತ್ರಿಯವರು ಹುಬ್ಬಳ್ಳಿಯಷ್ಟೇ ಅಲ್ಲ, ಹಿಜಾಬ್ ವಿಷಯದಲ್ಲೂ ನ್ಯಾಯಾಲಯವನ್ನು ಮೀರಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಅಲ್ಪಸಂಖ್ಯಾತರನ್ನು ಓಲೈಸುವುದೇ ದೊಡ್ಡ ಕೆಲಸವಾಗಿದೆ ಎಂದರು. ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಮೃದು ಧೋರಣೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಎಲ್ಲರೂ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಈಶ್ವರಪ್ಪ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತು ಹೋಗಿದೆಯೇ ಎಂಬ ಅನುಮಾನಗಳು ಬರುತ್ತಿವೆ. ರಾಜ್ಯಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಪಾಠ ಕಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಬಿಜೆಪಿಯವರ ವಿರುದ್ಧ ಎಷ್ಟೇ ಪ್ರಕರಣಗಳನ್ನು ದಾಖಲಿಸಿದರೂ ನಾವು ಹೆದರುವುದಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಲಕ್ಷಾಂತರ ಪ್ರಕರಣವನ್ನು ದಾಖಲಿಸಲಾಗಿತ್ತು. ಈಗ ಬೇಕಿದ್ದರೆ ಅವುಗಳಿಗೂ ಮರುಜೀವ ನೀಡಲಿ. ನಮಗೆ ಯಾವುದೇ ಅಂಜಿಕೆಯಿಲ್ಲ ಎಂದು ಹೇಳಿದರು.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ : ಡಿಕೆಶಿ

ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆ ಚುನಾವಣೆಯಿಂದ ಸ್ರ್ಪಧಿಸಲು ಅವಕಾಶ ನೀಡಿದರೆ ಗೆಲುವು ಸಾಧ್ಯವಾಗುತ್ತದೆ. ಯಾರಿಗೇ ಕೊಟ್ಟರೂ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ಅಲ್ಲಿನ ಹಾಲಿ ಸಂಸದ ಶಿವಕುಮಾರ್ ಉದಾಸಿ ಜೊತೆ ತಾವು ಚರ್ಚೆ ಮಾಡಿದ್ದು, ಅವರು ಮತ್ತೆ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಹಿರಿಯರ ಜೊತೆ ಸಮಾಲೋಚನೆ ನಡೆಸಿದಾಗ, ನೀವು ಕೆಲಸ ಮಾಡಿ ಎಂದು ಸಲಹೆ ನೀಡಿದರು. ಅದರಂತೆ ನಾವು ಓಡಾಡುತ್ತಿದ್ದೇವೆ ಎಂದರು.

ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಸಂಸದರಾಗಿದ್ದಾರೆ. ಅವರಿಗೆ ತೊಂದರೆ ಕೊಟ್ಟು ನಾವು ಟಿಕೆಟ್ ಕೇಳುವುದಿಲ್ಲ. ಹೀಗಾಗಿ ಖಾಲಿ ಇರುವ ಹಾವೇರಿ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದರು.

RELATED ARTICLES

Latest News