ಬೆಳಗಾವಿ,ಫೆ.5- ಚುನಾವಣೆ ನಡೆದು ಒಂದೂವರೆ ವರ್ಷದ ನಂತರ ಬೆಳಗಾವಿ ಮೇಯರ್, ಉಪಮೇಯರ್ ಹುದ್ದೆಗೆ ನಾಳೆ ಬೆಳಗ್ಗೆ ಚುನಾವಣೆ ನಡೆಯುತ್ತಿದೆ. 2021ರ ಸೆಪ್ಟಂಬರ್ 3ರಂದು ಪಾಲಿಕೆಗೆ ಚುನಾವಣೆ ನಡೆದಿತ್ತು. ಬಿಜೆಪಿ 35 ಸ್ಥಾನ, ಕಾಂಗ್ರೆಸ್ 10 ಹಾಗೂ ಪಕ್ಷೇತರರು 13 ಸ್ಥಾನಗಳನ್ನು ಗೆದ್ದಿದ್ದರು. ಆದರೆ ಈವರೆಗೂ ಸದಸ್ಯರ ಪ್ರತಿಜ್ಞೆ ಸ್ವೀಕರವಾಗಲಿ, ಮೇಯರ್, ಉಪಮೇಯರ್ ಆಯ್ಕೆಯಾಗಲಿ ನಡೆದಿರಲಿಲ್ಲ.
ಇದೇ ಮೊದಲ ಬಾರಿಗೆ ಪಕ್ಷದ ಆಧಾರದ ಮೇಲೆ ಚುನಾವಣೆ ನಡೆದಿರುವುದರಿಂದ ಮೇಯರ್, ಉಪಮೇಯರ್ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.
ಕುತೂಹಲ ಕೆರಳಿಸಿದ ಬೊಮ್ಮಾಯಿ ಹಾಗೂ ಬಿಎಸ್‌ವೈ ದೆಹಲಿ ಪ್ರವಾಸ
ಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಮತ್ತು ಉಪಮೇಯರ್ ಹುದ್ದೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದೆ. ಬಹುಮತವಿರುವುದರಿಂದ ಬಿಜೆಪಿಯವರೇ ಮೇಯರ್, ಉಪಮೇಯರ್ ಆಗುವುದು ಖಚಿತವಾಗಿದೆ.
ನಾಳೆ ಚುನಾವಣೆ ಇರುವುದರಿಂದ ಇದಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
Belgaum, Mayor, Election, tomorrow,