ಬೆಳಗಾವಿ,ಜು.13- ಬೈಕ್‌ನಲ್ಲಿ ತೆರಳುತ್ತಿದ್ದ ಯುವ ಗಾಯಕನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ. ಮಾರುತಿ ಅಡಿವೆಪ್ಪ ಲಠ್ಠೆ (22) ಕೊಲೆಯಾದ ಯುವಕ ಮಾರುತಿ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈರಪ್ಪ ಮತ್ತವರ ಗ್ಯಾಂಗ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಶವದ ಮೇಲೆ ಕಾರು ಹಾಯಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುತ್ತಿದ್ದ ವಿಶಿಷ್ಟ ಪ್ರತಿಭಾಶಾಲಿ ಗಾಯಕ. ತನ್ನದೇ ಆದ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡುಗಳನ್ನು ಕಂಪೋಸ್ ಮಾಡಿ ಅಪ್‌ಲೋಡ್ ಮಾಡುತ್ತಿದ್ದ.
ಇತ್ತೀಚೆಗೆ ಆತನ ಹಾಡು ಜನಪ್ರಿಯತೆ ಗಳಿಸಿತ್ತು ಆದರೆ, ಇದೀಗ ಕೇವಲ ಐದೇ ಐದು ಸಾವರ ರೂಪಾಯಿಗೆ ಸಿಂಗರ್ ಮಾರುತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಹಿಂದೆ ಕಬ್ಬಿನ ಕಟಾವು ಮಾಡುವ ತಂಡದಲ್ಲಿ ಕೆಲಸ ಮಾಡುವಾಗ ಆರೋಪಿ ಈರಪ್ಪ ಅಕ್ಕಿವಾಟೆ ಬಳಿ ಮಾರುತಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದ ನಂತರ 45 ಸಾವಿರ ರೂಪಾಯಿ ವಾಪಸ್ ಕೊಟ್ಟಿದ್ದ.
ಕಾಲಲ್ರಮೇಣ ತನ್ನ ಹಾಡುಗಳಿಗೆ ಭಾರೀ ಡಿಮ್ಯಾಂಡ್ ಬಂದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮತ್ತು ಕಾರ್ಖಾನೆಗೆ ಸಾಗಣೆ ಮಾಡುವ ಗ್ಯಾಂಗ್‌ನ ಕೆಲಸವನ್ನು ಬಿಟ್ಟು ಸಂಗೀತದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದ.
ಇದು ಈರಪ್ಪನಿಗೆ ಇಷ್ಟವಾಗಲಿಲ್ಲ ಅಲ್ಲದೇ ಬಾಕಿ 5 ಸಾವಿರ ಹಣ ವಾಪಸ್ ನೀಡದಕ್ಕೂ ಆಕ್ರೋಶಗೊಂಡಿದ್ದ.ಇದೇ ಜಿದ್ದಿನಲ್ಲಿ ಈರಪ್ಪ ಗ್ಯಾಂಗ್ ಕಟ್ಟಿಕೊಂಡು ಹೋಗಿ ಮಾರುತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕಾರು ಹರಿಸಿ ಪರಾರಿಯಾಗುತ್ತಿದ್ದ ಹಂತಕರ ಕಾರು ಕೂಡ ಪಲ್ಟಿಯಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಈ ವೇಳೆ ಆರೋಪಿ ಈರಪ್ಪ ಅಕ್ಕಿವಾಟೆಗೆ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಸಿದ್ದರಾಮ ವಡೆಯರ್ ಹಾಗೂ ಆಕಾಶ್ ಪೂಜಾರಿಯನ್ನ ಬಂಧಿಸಿರುವ ಪೊಲೀಸರು, ಇತರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!