ಬೆಂಗಳೂರು, ಜು.9-ಬೆಳಗಾವಿ ನಗರದ ಶಹಪುರದಲ್ಲಿ ಮನಕಲಕುವ ಘಟನೆ ನಡೆದಿದ್ದು, ಅಕ್ಕ ಸಾಲಿಗರ ಕುಟುಂಬದ ಮೂವರು ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಜೋಷಿಮಹಲ್ ನಿವಾಸಿಗಳಾದ ಮಂಗಳಾ (85), ಮಕ್ಕಳಾದ ಸುವರ್ಣ (52) ಮತ್ತು ಸಂತೋಷ್ (47) ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗಳು ಸುನಂದಾ ಸ್ಥಿತಿ ಚಿಂತಾಜನಕವಾಗಿದೆ.
ಬೆಳಗಾವಿ ನಗರದ ಜ್ಯೋತಿಮಾಳ್ ಪ್ರದೇಶದಲ್ಲಿ ಮಂಗಳಾ ಕುಟುಂಬ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಅಕ್ಕ ಸಾಲಿಗ ವೃತ್ತಿ ಮಾಡುತ್ತಿದ್ದ ಸಂತೋಷ್ ಅವರು ಕುಟುಂಬ ನಿರ್ವಹಣೆ ಮಾಡುತ್ತಿದ್ದರು.
ಇಬ್ಬರು ಸಹೋದರಿಯರಿಗೆ ಮದುವೆಯಾಗದ ಕಾರಣ ಸಂತೋಷ್ ಸಹ ಮದುವೆ ಮಾಡಿಕೊಂಡಿರಲಿಲ್ಲ. ಕುಟುಂಬ ನಿರ್ವಹಣೆಗಾಗಿ ಸಂತೋಷ್ ಅವರು ಸಾಲ ಮಾಡಿಕೊಂಡಿದ್ದರು. ಸಾಲದ ಹಣ ಹಿಂದಿರುಗಿಸಲು ಪರಿತಪಿಸುತ್ತಿದ್ದರು.ಈ ನಡುವೆ ಕುಟುಂಬದ ನಾಲ್ವರೆಲ್ಲರೂ ಸೇರಿ ಆತಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಅದರಂತೆ ಡೆತ್‌ನೋಟ್ ಬರೆದಿಟ್ಟು ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ವಿಷ ಸೇವಿಸಿ ಆತಹತ್ಯೆಗೆ ಯತ್ನಿಸಿದ್ದಾರೆ.
ಇವರ ಮನೆಯಿಂದ ಕೂಗಾಟ ಕೇಳಿ ನೆರೆಮನೆಯವರು ಬಂದು ನೋಡುವಷ್ಟರಲ್ಲಿ ಮೂವರ ಪ್ರಾಣ ಪಕ್ಷಿ ಹಾರಿಹೋಗಿತ್ತು.ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಈ ಪೈಕಿ ನರಳಾಡುತ್ತಿದ್ದ ಸುನಂದಾ ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಆಕೆಯ ಸ್ಥಿತಿಯೂ ಚಿಂತಾಜನಕವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಭರಸೆ ಹಾಗೂ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು,ಅಧಿಕ ಸಾಲ ಮಾಡಿಕೊಂಡಿದ್ದರಿಂದ ಈ ಕುಟುಂಬ ಆರ್ಥಿಕ ಸಮಸ್ಯೆ ಎದುರಿಸುತ್ತಿತ್ತು ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸ್ಥಳದಲ್ಲಿ ದೊರೆತಿರುವ ಡೆತ್‌ನೋಟ್ ವಶಕ್ಕೆ ಪಡೆಯಲಾಗಿದೆ. ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತಹತ್ಯೆಗೆ ನಿಖರ ಕಾರಣವೇನೆಂಬುವುದನ್ನು ತನಿಖೆ ನಡೆಸುತ್ತೇವೆ ಎಂದು ಹೇಳಿದರು. ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
- ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
- SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು
- ವಾಯು ಪಡೆ ವಿಮಾನ ಪತನ, ಇಬ್ಬರು ಪೈಲೆಟ್ ಸಾವು
- ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಆರಂಭ : ಡಿಕೆಶಿ
- ಕರ್ನಾಟಕದ ವಿಷಯದಲ್ಲಿ ಕೇಂದ್ರ ಸರ್ಕಾರದ ದ್ವೇಷ-ತಾರತಮ್ಯ ನೀತಿ ವಿರುದ್ಧ ಸಿಎಂ, ಡಿಸಿಎಂ ಹೋರಾಟ : ಸುರ್ಜೇವಾಲ