ಬೆಳಗಾವಿ ಅಧಿವೇಶನಕ್ಕೆ ಅಧಿಕಾರಿಗಳ ಪೂರ್ವಭಾವಿ ಸಭೆ

Social Share

ಬೆಳಗಾವಿ, ನ.24- ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಸಮಿತಿಗಳ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಗಣ್ಯರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಬೇಕು.

ಕಳೆದ ಬಾರಿಯಂತೆ ಉತ್ತಮ ವ್ಯವಸ್ಥೆ ಮಾಡಿಕೊಳ್ಳಬೇಕು. ಇನ್ನೂ ಸಾಕಷ್ಟು ಸಮಯ ಇರುವುದರಿಂದ ಊಟ, ವಸತಿ, ಕುಡಿಯುವ ನೀರು, ಸಾರಿಗೆ, ತುರ್ತು ಆರೋಗ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

BIG NEWS : ನಿಮ್ಮ ಖುಷಿ ತುಂಬಾ ದಿನ ಇರಲ್ಲ : ADGP ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ

ಇದಲ್ಲದೆ, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೂ ಅಡಚಣೆಯಾಗದಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಗಣ್ಯರ ಭದ್ರತೆ, ಸುಗಮ ಸಂಚಾರಕ್ಕೆ ಕ್ರಮ: ಗಣ್ಯರ ಭದ್ರತೆ, ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದರು.

ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಕುಕ್ಕರ್ ಕ್ರಿಮಿ ಶಾರೀಕ್

ನಗರದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಎಲ್ಲ ಬಗೆಯ ವಸತಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗಿದೆ. ಅಗತ್ಯತೆ ಅಧರಿಸಿ ಅವುಗಳನ್ನು ಬಳಕೆ ಮಾಡಲಾಗುವುದು ಎಂದು ವಸತಿ ಸಮಿತಿಯ ಅಧ್ಯಕ್ಷರೂ ಆಗಿರುವ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ ತಿಳಿಸಿದರು.

Belgaum, Winter, Session, officers, meeting,

Articles You Might Like

Share This Article