Thursday, November 28, 2024
Homeರಾಜ್ಯಬೆಳಗಾವಿಯ ಚಳಿಗಾಲದ ಅಧಿವೇಶನ ಒಂದು ದಿನ ಮೊಟಕು

ಬೆಳಗಾವಿಯ ಚಳಿಗಾಲದ ಅಧಿವೇಶನ ಒಂದು ದಿನ ಮೊಟಕು

Belgaum's winter session shortened by a day

ಮಂಗಳೂರು,ನ.28– ರಾಜಕೀಯ ಆರೋಪ- ಪ್ರತ್ಯಾಪರೋಪಗಳು, ಸಂಘರ್ಷ ಗಳಿಗೆ ಸದನದ ಹೊರತಾಗಿ ಸಾಕಷ್ಟು ಸಮಯ ಇದೆ. ಬೆಳಗಾವಿಯ ಅಧಿವೇಶನದಲ್ಲಿ ಅಭಿವೃದ್ಧಿ ಕುರಿತ ಚರ್ಚೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಸಲಹೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.9ರಿಂದ 19ರವರೆಗೂ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ನಡೆಸಲಾಗುತ್ತದೆ. ಡಿ.20 ರಂದು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮೇಳನ ನಡೆಯುವುದರಿಂದ ಒಂದು ದಿನ ಮೊದಲೇ ಅಧಿವೇಶನ ಮೊಟಕುಗೊಳಿಸಬೇಕು ಎಂದು ಸರ್ಕಾರ ನಿರ್ಧರಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಅಧಿವೇಶನದ ಮೊದಲ ದಿನ ನಡೆಯುವ ಸಂಸದೀಯ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚೆಗೆ ಆದ್ಯತೆ ದೊರೆಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಚರ್ಚೆಗಳಿಗೆ ಹೆಚ್ಚಿನ ಹಾಗೂ ವಿಶೇಷ ಸಮಯ ಮೀಸಲಿಡಲಾಗುವುದು ಎಂದು ಹೇಳಿದರು.

ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ಪ್ರಜಾಪ್ರಭುತ್ವದ ಸೌಂದರ್ಯ ಅದನ್ನು ಬೇಡ ಎಂದು ಹೇಳಲು ಆಗುವುದಿಲ್ಲ. ಆದರೆ ಅಧಿವೇಶನಕ್ಕೂ ಮುನ್ನ ಮತ್ತು ಅನಂತರ ಸಾಕಷ್ಟು ಸಮಯ ಇದೆ. ಅಲ್ಲಿ ಚರ್ಚೆ ಮಾಡಬಹುದು. ಕಲಾಪದಲ್ಲಿ ಅಭಿವೃದ್ಧಿ ಕುರಿತ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಿದೆ ಎಂದರು.

ವಕ್‌್ಫ, ಮುಡಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ನೀಡುವ ಬಗ್ಗೆ ಆ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಉಪಚುನಾವಣೆಯಲ್ಲಿ ಚುನಾಯಿತರಾದ ಮೂವರು ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಸಮಯ ನಿಗಧಿ ಮಾಡುವುದಕ್ಕೆ ಯಾವುದೇ ಪ್ರಸ್ತಾವನೆಗಳು ತಮ ಮುಂದಿಲ್ಲ ಎಂದರು.

ಶಾಸಕರು ಅನುದಾನ ಸಿಗುತ್ತಿಲ್ಲ ಎಂದು ತಾವಿದ್ದಲ್ಲಿಯೇ ಹೇಳಿಕೆ ನೀಡುತ್ತಿದ್ದರೆ ಸಾಧ್ಯವಿಲ್ಲ. ಸಂಬಂಧಪಟ್ಟ ಸಚಿವರು ಇಲಾಖೆಗಳ ಜೊತೆ ಚರ್ಚೆ ನಡೆಸಿ ಹಣ ಅನುದಾನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ. ಸಣ್ಣಪುಟ್ಟ ವಿಚಾರಗಳಿಗೂ ನ್ಯಾಯಾಲಯದಲ್ಲಿ ದಾವೆ ಹೂಡಿ ತಡೆಯಾಜ್ಞೆ ತರುವುದರಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

RELATED ARTICLES

Latest News