ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ವಕ್ತಾರನ ಬಂಧನ

Social Share

ಕೋಲ್ಕತ್ತಾ, ಮಾ.4- ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ.

ನಗರದ ಬುರ್ಟೊಲ್ಲಾ ಪೊಲೀಸ್ ಠಾಣೆಯ ದೊಡ್ಡ ಪ್ರಮಾಣದ ಅಧಿಕಾರಿ ಮತ್ತು ಸಿಬ್ಬಂದಿಗಳ ಗುಂಪು ಬರಾಕ್‍ಪೋರ್ ಉತ್ತರ 24 ಪರಗಣ ಜಿಲ್ಲೆಯಯಲ್ಲಿರುವಬಾಗ್ಚಿ ಅವರ ನಿವಾಸದ ಮೇಲೆ ಮುಂಜಾನೆ 3.30 ರ ಸುಮಾರಿಗೆ ದಾಳಿ ನಡೆಸಿ, ಬಂಧಿಸಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಆರು ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪರವಾನಗಿ ಅಮಾನತು

ಮುಖ್ಯಮಂತ್ರಿ ವಿರುದ್ಧದ ಹೇಳಿಕೆಗಾಗಿ ಶುಕ್ರವಾರ ಬಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ಐಪಿಸಿಯ 120(ಬಿ) (ಕ್ರಿಮಿನಲ್ ಪಿತೂರಿ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಮತ್ತು ಇತರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTCಯಲ್ಲಿ ಪ್ರಯಾಣ ಉಚಿತ

ಈ ಬಗ್ಗೆ ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ ಎಂದು ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅೀಧಿರ್ ರಂಜನ್ ಚೌಧರಿ ಅವರ ಮೇಲೆ ಮಮತಾ ಬ್ಯಾನರ್ಜಿ ವೈಯಕ್ತಿಕ ದಾಳಿ ಆರಂಭಿಸಿದ್ದಾರೆ ಎಂದು ಬಾಗ್ಚಿ ವಕೀಲರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯ ನಡುವೆಯೂ ಬಗ್ಚಿಯನ್ನು ಬುರ್ಟೊಲ್ಲಾ ಪೊಲೀಸ್ ಠಾಣೆಗೆ ಕರೆತರಲಾಗಿದೆ.

Bengal, Congress, spokesperson, Kaustav Bagchi, Arrested, Comments, Against, Mamata Banerjee,

Articles You Might Like

Share This Article